ನವದೆಹಲಿ: ಶನಿವಾರ ಯಮುನಾ ಹೆದ್ದಾರಿಯಲ್ಲಿ ಖಾಸಗಿ ಬಸ್​ ಒಂದರಲ್ಲಿ ಮನೆಗೆ ಮರಳುತ್ತಿದ್ದ ದೆಹಲಿ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.
ಬಸ್​ನಲ್ಲಿದ್ದ ಸಿಬ್ಬಂದಿ ಮಹಿಳೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಗಿದ್ದು, ಈ ವೇಳೆ ಬಸ್​ ಲಖನೌದಿಂದ ದೆಹಲಿಗೆ ತೆರಳುತ್ತಿತ್ತು. ಶನಿವಾರ ಬೆಳಗ್ಗೆ ಬಸ್​ ಮಥುರಾದಲ್ಲಿನ ಮಂತ್​ ಪ್ಲಾಜಾ ಬಳಿ ಬರುತ್ತಿದ್ದಂತೆ ಮಹಿಳೆ 112 ಸಹಾಯವಾಣಿಗೆ ಕರೆ ಮಾಡಿ ಬಸ್​ ಕ್ಲೀನರ್​ ರೇಪ್​ ಮಾಡಿದ್ದಾಗಿ ಮಾಹಿತಿ ನೀಡಿದಳು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಬಸ್​ ಕ್ಲೀನರ್​ ರವಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಸ್​ ತಪಾಸಣೆಯನ್ನು ನಡೆಸಿದ್ದಾರೆ. ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ ಬಳಿಕ ಆಕೆಯನ್ನು ಪೊಲೀಸ್​ ಬೆಂಗಾವಲಿನಲ್ಲಿ ದೆಹಲಿಯ ರೋಹಿಣಿ ಏರಿಯಾದಲ್ಲಿನ ಅವರ ಮನೆಗೆ ಬಿಟ್ಟು ಬರಲಾಯಿತು.
ಬಹರೈಚ್​ ಜಿಲ್ಲೆಯ ನಿವಾಸಿಯಾಗಿರುವ ಆರೋಪಿ ರವಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − fifteen =
Remember me
