ಡೆಹ್ರಾಡೂನ್​:ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಭಾರೀ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಈ ನಡುವೆ ಅನಾಹುತಗಳು ಹೆಚ್ಚಾಗುತ್ತಲೇ ಇವೆ. ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದರೆ, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.
ಉತ್ತರಾಖಂಡದಲ್ಲೂ ಭಾರೀ ಮಳೆಯಾಗುತ್ತಿದ್ದು, ಇಲ್ಲಿನ ಧ್ಹೇಲಾ ನದಿಯ ನೀರಿನ ರಭಸಕ್ಕೆ ಕಾರು ಕೊಚ್ಚಿ ಹೋಗಿದ್ದು, 9 ಮಂದಿ ಮೃತಪಟ್ಟಿದ್ದಾರೆ. ಓರ್ವ ಬಾಲಕಿ ಬದುಕುಳಿದಿದ್ದಾಳೆ.
#WATCHUttarakhand | 9 died, 1 girl rescued alive and about 5 trapped after a car washed away in Dhela river of Ramanagar amid heavy flow of water induced by rains early this morning, confirms Anand Bharan, DIG, Kumaon Rangepic.twitter.com/Dxd27Di5mv
— ANI UP/Uttarakhand (@ANINewsUP)July 8, 2022

ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದು, ಬಾಲಕಿಯನ್ನು ರಕ್ಷಿಸಲಾಗಿದೆ. ತೀವ್ರ ಮಳೆಯಿಂದಾಗಿ ಶುಕ್ರವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ ಎಂದು ಕುಮೌನ್ ವಲಯದ ಡಿಐಜಿ ಆನಂದ್ ಭರನ್ ತಿಳಿಸಿದ್ದಾರೆ.
ಈ ಮಧ್ಯೆ ಉತ್ತರಾಖಂಡದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ವ್ಯಕ್ತಿ ಬುಧವಾರ ನೀರಿನಲ್ಲಿ ಕೊಚ್ಚಿಹೋದ ಘಟನೆಯೂ ವರದಿಯಾಗಿದೆ.(ಏಜೆನ್ಸೀಸ್​)
ಜಪಾನ್​ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ಗುಂಡಿನ ದಾಳಿಗೆ ತೀವ್ರ ಖಂಡನೆ: ಸ್ನೇಹಿತನ ಕುರಿತು ಪ್ರಧಾನಿ ಮೋದಿ ಟ್ವೀಟ್​​

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one + 11 =
Remember me
