ಡೆಹ್ರಾಡೂನ್​:ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಪಕ್ಷದ ಮೌಲ್ಯವನ್ನು ಕಡಿಮೆ ಮಾಡುತ್ತಿದ್ದಾರೆ. ಇದರ ಬಗ್ಗೆ ನೀವು ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದ ಮಾಜಿ ಶಾಸಕನನ್ನು ಉತ್ತರಾಖಂಡ ಬಿಜೆಪಿ ಪಕ್ಷದಿಂದ ವಜಾಗೊಳಿಸಿದೆ.
ಇದನ್ನೂ ಓದಿ:ಜೈಲಿನ ಬಾತ್​ರೂಂನಲ್ಲಿ ಕ್ಯಾಮೆರಾ ಹಾಕಿದ್ದರು- ಪಾಕ್​ನ ಕರಾಳ ಮುಖ ಬಿಚ್ಚಿಟ್ಟ ನವಾಜ್​ ಷರೀಫ್​ ಪುತ್ರಿ
ರಾಜ್ಯದ ಮಾಜಿ ಸಚಿವ, ಹಾಲಿ ಶಾಸಕ ಲಖಿ ರಾಮ್​ ಜೋಶಿ ಅವರು ನವೆಂಬರ್​ 11ರಂದು ಪ್ರಧಾನಿಯವರಿಗೆ ಪತ್ರ ಬರೆದಿದ್ದರು. ರಾಜ್ಯದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್​ ಅವರು ಕಪ್ಪು ಹಣ ಸಂಗ್ರಹದಲ್ಲಿ ನಿರತರಾಗಿದ್ದಾರೆ. ಅವರ ಮೇಲೆ ಸಿಬಿಐ ತನಿಖೆಗೆ ಹೈ ಕೋರ್ಟ್​ ಆದೇಶಿಸಿದೆ. ಇದರಿಂದಾಗಿ ರಾಜ್ಯದ ಜನರು ಪಕ್ಷದ ಮೇಲಿದ್ದ ನಂಬಿಕೆ ಕಳೆದುಕೊಳ್ಳುವಂತಾಗಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದರು.
ಇದು ರಾಜ್ಯದ ಆಂತರಿಕ ವಿಚಾರವಾಗಿದ್ದು, ಈ ಕುರಿತಾಗಿ ರಾಮ್​ ಜೋಶಿ ಅವರು ಮೊದಲು ರಾಜ್ಯದ ನಾಯಕರ ಜತೆ ಚರ್ಚಿಸಬೇಕಿತ್ತು. ಅದರ ಬದಲಾಗಿ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಪಕ್ಷದ ಶಿಸ್ತನ್ನು ಕಾಪಾಡಿಕೊಳ್ಳದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ವಜಾಗೊಳಿಸಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬನ್ಸಿಧರ್​ ಭಗತ್​ ತಿಳಿಸಿದ್ದಾರೆ.
ಇದನ್ನೂ ಓದಿ:ಕ್ವಾರಂಟೈನ್‌ನಲ್ಲೇ 9ನೇ ವಿವಾಹ ವಾರ್ಷಿಕೋತ್ಸವ ಆಚರಿಸಿದ ಅಶ್ವಿನ್ ದಂಪತಿ
ಪಕ್ಷ ನನ್ನನ್ನು ವಜಾ ಮಾಡಿರುವುದು ತಪ್ಪು. ನಾನು ರಾಜ್ಯದಲ್ಲಿ ಪಕ್ಷವನ್ನು ಕಟ್ಟಲು ಸಾಕಷ್ಟು ಕಷ್ಟ ಪಟ್ಟಿದ್ದೇನೆ. ಆರ್​ಎಸ್​ಎಸ್​ ಸಂಘಟನೆಯೊಂದಿಗೇ ಬದುಕು ರೂಪಿಸಿಕೊಂಡಿದ್ದೇನೆ. ಆದರೆ ಪಕ್ಷ ಈ ರೀತಿ ಮಾಡುವುದು ನ್ಯಾಯವಲ್ಲ. ನಾನು ಈ ವಿಚಾರದಲ್ಲಿ ಮತ್ತೆ ಪ್ರಧಾನಿಯವರ ಬಳಿ ತೆರಳುತ್ತೇನೆ ಎಂದು ಲಖಿ ರಾಮ್​ ಜೋಶಿ ಅವರು ಹೇಳಿದ್ದಾರೆ. (ಏಜೆನ್ಸೀಸ್)
ಪದೇಪದೆ ಸಾಯುತ್ತೇನೆಂದು ಹೆದರಿಸುತ್ತಿದ್ದ ಹೆಂಡತಿಗೆ ಡೈವೋರ್ಸ್​ ಕೊಟ್ಟ ಗಂಡ

ಗಡಿಯಲ್ಲಿ ಸೇನೆಯ ದೀಪಾವಳಿ; ಪಾಕಿಸ್ತಾನದ ಬಂಕರ್​, ಲಾಂಚ್​ ಪ್ಯಾಡ್​ಗಳು ಪುಡಿಪುಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 19 =
Remember me
