ನವದೆಹಲಿ:ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಳ್ಳುವಂಥ ಪ್ರಕರಣವೊಂದಕ್ಕೆ ಉತ್ತರಾಖಂಡ ಸಾಕ್ಷಿಯಾಗಿದೆ. ಇಲ್ಲಿನ ಮುಖ್ಯಮಂತ್ರಿ ತೀರತ್ ಸಿಂಗ್ ರಾವತ್ ಇಂದು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಉತ್ತರಾಖಂಡ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ನಾಲ್ಕು ತಿಂಗಳುಗಳು ಕಳೆಯುವುದರೊಳಗೆ ಇಂಥದ್ದೊಂದು ಬೆಳವಣಿಗೆ ನಡೆದಿರುವುದು ಕುತೂಹಲ ಕೆರಳಿಸಿದೆ. ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಲು ಮೂರು ದಿನಗಳ ಹಿಂದೆ ಹೋಗಿದ್ದ ಅವರಿಗೆ, ಸ್ಥಾನ ತ್ಯಜಿಸುವಂತೆ ಪಕ್ಷ ಇಂದು ಸೂಚಿಸಿತ್ತು ಎನ್ನಲಾಗಿದೆ. ಅದಾದ ಕೆಲವೇ ಸಮಯದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಅವರು, ನಂತರ ಪಕ್ಷದ ವರಿಷ್ಠ ಜೆ.ಪಿ. ನಡ್ಡಾ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಉತ್ತರಾಖಂಡದಲ್ಲಿನ ಬಿಜೆಪಿ ಶಾಸಕರು ನಾಳೆ ಒಂದೆಡೆ ಸೇರಿ ಚರ್ಚಿಸಿ ನೂತನ ಮುಖ್ಯಮಂತ್ರಿ ಕುರಿತು ಚರ್ಚೆ ಮಾಡಲಿದ್ದಾರೆ. ತೀರತ್ ಸಿಂಗ್ ರಾವತ್ ಮುಖ್ಯಮಂತ್ರಿಯಾಗಿ ಮಾರ್ಚ್​ನಲ್ಲಷ್ಟೇ ಪ್ರಮಾಣವಚನ ಸ್ವೀಕರಿಸಿದ್ದರು. (ಏಜೆನ್ಸೀಸ್​)
ಕೋವಿಡ್​ನಿಂದಾದ ಸಾವುಗಳ ಪೈಕಿ 3ನೇ ಸ್ಥಾನದಲ್ಲಿ ಭಾರತ; ಇದುವರೆಗೆ ಸತ್ತವರ ಸಂಖ್ಯೆ 4 ಲಕ್ಷಕ್ಕೂ ಅಧಿಕ!

ಗರ್ಭಿಣಿಯರು ಕರೊನಾ ಲಸಿಕೆ ತೆಗೆದುಕೊಳ್ಳಬಹುದೇ?; ಕೇಂದ್ರ ಸರ್ಕಾರದ ಸ್ಪಷ್ಟನೆ ಹೀಗಿದೆ…

ಎರಡೂ ಡೋಸ್ ಲಸಿಕೆ ಪಡೆದರೆ ಕೋವಿಡ್​ನಿಂದಾಗಿ ಸಾಯದಿರುವ ಸಾಧ್ಯತೆ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 20 =
Remember me
