ಉತ್ತರಾಖಂಡ:ಅಧಿಕಾರಿಗಳು ಅಕ್ರಮ ಮದರಸಾವನ್ನು ಧ್ವಂಸಗೊಳಿಸಿದ ಕೂಡಲೇ ನಗರ ಪ್ರದೇಶದಲ್ಲಿ ತೀವ್ರ ಹಿಂಸಾಚಾರ ಭುಗಿಲೆದ್ದಿದ್ದು, ಸ್ಥಳೀಯರ ಗುಂಪೊಂದು ಪೊಲೀಸ್‌ ಅಧಿಕಾರಿಗಳ ಮೇಲೆ ಕಲ್ಲು ತೂರಿದ್ದಲ್ಲದೆ, ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರಾಖಂಡದ ಹಲ್ದ್ವಾನಿಯಲ್ಲಿ ವರದಿಯಾಗಿದೆ. ಗಲಭೆ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ ಇದೀಗ ನಗರದ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ:ಇಂದು ಪುರಂದರದಾಸರ ಆರಾಧನೆ: ಬದುಕಿನ ಸಂತಸವನ್ನು ಬೆಳಗಿದ ಸಾಹಿತ್ಯ ಭಾಸ್ಕರ
ಕಾನೂನುಬಾಹಿರವಾಗಿ ನಿರ್ಮಿಸಿದ ಮದರಸಾವನ್ನು ಕೆಡವಿದ್ದಕ್ಕಾಗಿ ಸ್ಥಳೀಯ ನಿವಾಸಿಗಳು ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲುಗಳನ್ನು ತೂರಿ ಆಕ್ರೋಶ ಹೊರಹಾಕಿದ್ದಾರೆ. ಸದ್ಯದ ವರದಿಯ ಪ್ರಕಾರ, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ತೀವ್ರವಾಗುತ್ತಿದ್ದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಟ್ಟುನಿಟ್ಟಿನ ಕರ್ಫ್ಯೂ ವಿಧಿಸಲಾಗಿದೆ.
ನಗರದ ಬನ್‌ಭೂಲ್‌ಪುರ ಪ್ರದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾದ ಸುಮಾರು 60 ಜನರಲ್ಲಿ ಹೆಚ್ಚಿನವರು ಸ್ಥಳೀಯ ಮದರಸಾವನ್ನು ಧ್ವಂಸಗೊಳಿಸುವಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿ ಮತ್ತು ಪುರಸಭೆಯ ಕಾರ್ಮಿಕರು ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಭಾರತ ತಂಡ ಗೆದ್ದರೂ ಜಂಟಿ ಚಾಂಪಿಯನ್​! ಸ್ಯಾಫ್​ ಮಹಿಳಾ ಫುಟ್​ಬಾಲ್ ಟೂರ್ನಿಯ ಫೈನಲ್​ನಲ್ಲಿ ವಿಚಿತ್ರ ತೀರ್ಪು!
ಘಟನೆ ಬಗ್ಗೆ ಮಾತನಾಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ್ ಮೇನಾ, “ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಮದರಸಾಕ್ಕೆ ಈ ಹಿಂದೆಯೇ ನೋಟಿಸ್ ನೀಡಲಾಗಿತ್ತು. ಕೆಡವಲು ತಂಡ ಬಂದಾಗ ಪೊಲೀಸರ ಬೆಂಗಾವಲಿನಲ್ಲಿ ಸ್ಥಳೀಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಅದನ್ನು ವಿರೋಧಿಸಿದರು. ಬುಲ್ಡೋಜರ್ ಮದರಸಾವನ್ನು ಧ್ವಂಸಗೊಳಿಸುತ್ತಿದ್ದಂತೆ, ಗುಂಪುಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದರು” ಎಂದು ಹೇಳಿದರು,(ಏಜೆನ್ಸೀಸ್).
VIDEO | ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರ ಕಿತ್ತಾಟ! ಚಪ್ಪಲಿ ಹಿಡಿದು ಬಡಿದಾಡಿಕೊಂಡ ಮಹಿಳೆಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 9 =
Remember me
