ಡೆಹ್ರಾಡೂನ್​:ಉತ್ತರಾಖಂಡದ ಬಿಜೆಪಿ ಸರ್ಕಾರದ ಸಚಿವರೊಬ್ಬರು ಜನನಿಬಿಡ ಪ್ರದೇಶದಲ್ಲಿ ಇಬ್ಬರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಉತ್ತರಾಖಂಡದ ರಿಷಿಕೇಷದಲ್ಲಿ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಪರ-ವಿರೋಧದ ಚರ್ಚೆಯಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರೇಮ್​ಚಂದ್​ ಅಗರ್​ವಾಲ್​ ಟ್ರಾಫಿಕ್​ ಸಮಸ್ಯೆ ಉಂಟಾಗಿದ್ದ ಕಾರಣ ಮೊದಲು ನನ್ನನ್ನು ಗುರಿಯಾಗಿಸಿ ಬೈಯಲು ಶುರು ಮಾಡಿದ್ದರು ಮತ್ತು ಕೆಟ್ಟ ಶಬ್ದಗಳಿಂದ ನಿಂದಿಸಲು ಶುರು ಮಾಡಿದ್ದಾರೆ.
ಇದಾದ ಕೆಲವೇ ನಿಮಿಷಗಳ ಬಳಿಕ ಇಬ್ಬರು ಯುವಕರು ನನ್ನ ಹಾಗೂ ಭದ್ರತಾ ಸಿಬ್ಬಂದಿಯ ಬಟ್ಟೆಯನ್ನು ಹರಿದು ಹಲ್ಲೆ ನಡೆಸಲು ಮುಂದಾಗಿದ್ದಾರೆ ಇದನ್ನು ತಡೆಯುವ ಸಲುವಾಗಿ ನಾವು ಅವರ ಮೇಲೆ ಹಲ್ಲೆ ಮಾಡಬೇಕಾಯಿತು ಎಂದು ತಿಳಿಸಿದ್ದಾರೆ.
After heated verbal argument#Uttarakhandminister Prem Chand Aggarwal and his gunner thrash#Rishikeshresident on Tuesday. Minister claims that the youth attacked him and tore his Kurta#Uttarakhand@timesofindiapic.twitter.com/QZZt500coQ
ಇದನ್ನೂ ಓದಿ:ಬಹುಕೋಟಿ ವಂಚಕ ಯುವರಾಜ್​ ಸ್ವಾಮಿ ವಿರುದ್ಧ ಮತ್ತೆರಡು ಪ್ರಕರಣ ದಾಖಲು!
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ವಿಪಕ್ಷ ನಾಯಕ ಕರಣ್​ ಮಹಾರಾ ಬಿಜೆಪಿಯ ಸಚಿವರು ಜನರನ್ನು ನೊಣದಂತೆ ಕಾಣುತ್ತಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ವ್ಯಕ್ತಿ ಒಬ್ಬನ ಮೇಲೆ ಹಲ್ಲೆ ನಡೆಸುತ್ತಿರುವುದು ಖಂಡನೀಯ ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಿಡಿಕಾರಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಿ.ಎಸ್​. ಕುನ್ವರ್​ ಮೊದಲಿಗೆ ಸುರೇಂದ್ರ ಸಿಂಗ್​ ನೇಗಿ ಹಾಗೂ ಆತನ ಜೊತೆ ಇದ್ದ ವ್ಯಕ್ತಿ ಸಚಿವರಿಗೆ ನಿಂದಿಸಿ ಗಲಾಟೆ ತೆಗೆದಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − one =
Remember me
