ಉತ್ತರಾಖಂಡ:ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರಿಸಬೇಕೇ ಬೇಡವೇ ಎನ್ನುವ ಕುರಿತು ಕರ್ನಾಟಕದಲ್ಲಿ ಬಹಳಷ್ಟು ಸಮಯದಿಂದ ಪರ-ವಿರೋಧ ಅಭಿಪ್ರಾಯಗಳು ಚರ್ಚೆಯಲ್ಲಿವೆ. ಈ ಮಧ್ಯೆ ಇಲ್ಲೊಂದು ಕಡೆ ಭಗವದ್ಗೀತೆ ಮಾತ್ರವಲ್ಲದೆ ವೇದ-ಉಪನಿಷತ್ತುಗಳನ್ನೂ ಪಠ್ಯದಲ್ಲಿ ಸೇರಿಸಲು ಮುಂದಾಗಿದ್ದಾರೆ.
ಹೌದು.. ಉತ್ತರಾಖಂಡದ ಶಿಕ್ಷಣ ಸಚಿವ ಧನ್​ ಸಿಂಗ್ ರಾವತ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಶಿಕ್ಷಣ ಇಲಾಖೆ ಜಂಟಿಯಾಗಿ ಹಮ್ಮಿಕೊಂಡಿದ್ದ ಪರೀಕ್ಷಾ ಪರ್ವ್ 4.0 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತ ಶಿಕ್ಷಣ ಸಚಿವರು ಈ ವಿಷಯನ್ನು ತಿಳಿಸಿದರು.
ಉತ್ತರಾಖಂಡ ಸರ್ಕಾರವು ಭಗವದ್ಗೀತೆ, ವೇದ ಹಾಗೂ ಉಪನಿಷತ್ತುಗಳನ್ನು ಶಾಲಾ ಪಠ್ಯದಲ್ಲಿ ಅಳವಡಿಸಲು ಚಿಂತನೆ ನಡೆಸಿದೆ ಎಂದು ಇಂದು ತಿಳಿಸಿರುವ ಅವರು, ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳನ್ನೂ ಆಹ್ವಾನಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಅಲ್ಲದೆ ನೂತನ ಶಿಕ್ಷಣ ನೀತಿ ಅನುಸಾರ ಪಠ್ಯವನ್ನು ತಯಾರಿಸಲು ನಾಳೆ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ಪಠ್ಯದಲ್ಲಿ ಭಗವದ್ಗೀತೆ, ವೇದ, ಉಪನಿಷತ್ತುಗಳನ್ನು ಸೇರಿಸುವ ಕುರಿತು ಕೂಡ ಚರ್ಚೆ ನಡೆಯಲಿದೆ.
ಲಾಕ್​ಡೌನ್​ ಸೆಕ್ಸ್​: ಆರ್​ಟಿಐನಲ್ಲಿ ಬಹಿರಂಗವಾಯ್ತು ಆತಂಕಕಾರಿ ವಿಷಯ!

ಪೆಟ್ರೋಲ್ ಟ್ಯಾಂಕ್​ ಮೇಲೆ ಪ್ರೇಯಸಿ, ಬೈಕ್ ಚಲಾಯಿಸುತ್ತಲೇ ರೊಮ್ಯಾನ್ಸ್​: ಪ್ರೇಮಿ ಮೇಲೆ 3 ಕೇಸ್​…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
