ಉತ್ತರಾಖಂಡ:ನಿರ್ಮಾಣ ಹಂತದಲ್ಲಿದ್ದ ಸುರಂಗವು ಭಾನುವಾರ (ನ.12) ಮುಂಜಾನೆ ಕುಸಿದು ಕನಿಷ್ಠ 40 ಕಾರ್ಮಿಕರು ಸಿಲುಕಿಕೊಂಡಿರುವ ಘಟನೆ ಉತ್ತರಾಖಂಡದ ಉತ್ತರಕಾಶಿಯಲ್ಲಿ ವರದಿಯಾಗಿದೆ. ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆಯುವ ರಕ್ಷಣಾ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ:BBKS10: 34,15,472 ಮತ ಪಡೆದು ಸೇಫ್‌ ಆದ್ರೂ ಮನೆಯಿಂದ ಹೊರನಡೆದ ವರ್ತೂರ್ ಸಂತೋಷ್?
ತಡರಾತ್ರಿ ಈ ಘಟನೆ ಸಂಭವಿಸಿದ್ದು, ಸಿಲುಕಿದ ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ತಂಡವು ಉತ್ತರಾಖಂಡ ಸರ್ಕಾರ ಮತ್ತು ಆಡಳಿತದೊಂದಿಗೆ ಅಪಘಾತದ ಸ್ಥಳಕ್ಕೆ ತಲುಪಿದೆ. ಸದ್ಯ ಸುರಂಗದಿಂದ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆಯಲು ರಕ್ಷಣಾ ಕಾರ್ಯ ನಿರಂತರವಾಗಿ ಸಾಗುತ್ತಿದೆ. ಅದೃಷ್ಟವಶಾತ್, ಇಲ್ಲಿಯವರೆಗೆ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ. ವರದಿಗಳ ಪ್ರಕಾರ, ಸ್ಥಳದಲ್ಲಿ ಆಮ್ಲಜನಕ ಸಿಲಿಂಡರ್‌ಗಳನ್ನು ನಿಯೋಜಿಸಲಾಗಿದೆ.
#WATCH| Uttarakhand: A part of the tunnel under construction from Silkyara to Dandalgaon in Uttarkashi, collapsed. DM and SP of Uttarkashi district are present at the spot. SDRF, and Police Revenue teams are also present at the spot for relief work. Rescue operations underway.pic.twitter.com/hxrGqxWrsO
— ANI UP/Uttarakhand (@ANINewsUP)November 12, 2023

ಘಟನೆಯ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದೆ. “ಘಟನಾ ಸ್ಥಳಕ್ಕೆ ಪೊಲೀಸ್ ಪಡೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ತಲುಪಿವೆ. ದಾಖಲೆಯ ಪ್ರಕಾರ ಸುಮಾರು 40 ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ನಾವು ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸುತ್ತೇವೆ. ಇದುವರೆಗೆ ಯಾವುದೇ ಸಾವು-ನೋವು ವರದಿಯಾಗಿಲ್ಲ” ಎಂದು ಉತ್ತರಕಾಶಿ ಎಸ್ಪಿ ಅರ್ಪಣ್ ಯದುವಂಶಿ ಹೇಳಿದರು.
ಮಾಜಿ ಶಾಸಕರ ಜೇಬಿಗೆ ಕೈಹಾಕಿದ ಕಳ್ಳ!; ಹಣ ಎಗರಿಸಲು ಯತ್ನಿಸಿದವನಿಗೆ ಬಿತ್ತು ಗೂಸಾ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × two =
Remember me
