ಉತ್ತರಪ್ರದೇಶ:ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬೆಂಗಾವಲು ವಾಹನವು ಶನಿವಾರ (ಫೆ.24) ಲಕ್ನೋದಲ್ಲಿ ಪಲ್ಟಿಯಾಗಿದ್ದು, ಅಪಘಾತದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಸಿಎಂ ಯೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಮೈಸೂರು ಲೋಕಸಭಾ ಕ್ಷೇತ್ರ : ಬಿಜೆಪಿ ಟಿಕೆಟ್ ಮೇಲೆ ಭಾಸ್ಕರ್ ರಾವ್ ಕಣ್ಣು
ಗಾಯಗೊಂಡವರಲ್ಲಿ ಐವರು ಪೊಲೀಸ್ ಸಿಬ್ಬಂದಿ ಸೇರಿದ್ದರು ಎಂದು ವರದಿಯಾಗಿದೆ. ಲಕ್ನೋದ ರಸ್ತೆಯ ಮಧ್ಯೆ ಬಿದ್ದಿದ್ದ ಪ್ರಾಣಿಯ ಮೃತದೇಹಕ್ಕೆ ಡಿಕ್ಕಿ ಹೊಡೆದ ಕೂಡಲೇ ವಾಹನ ಪಲ್ಟಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಸಂಭವಿಸಿದ ತಕ್ಷಣವೇ ಕ್ಷಿಪ್ರ ಸ್ಪಂದನ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ದಾಖಲಿಸಿದೆ.
ಘಟನೆ ಕುರಿತು ಟೀಕಿಸಿದ ಉತ್ತರ ಪ್ರದೇಶದ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಬಿಡಾಡಿ ಪ್ರಾಣಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಕಾರಣ ಇಂದು ಸ್ವತಃ ಮುಖ್ಯಮಂತ್ರಿಗಳ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಹಲವಾರು ಮಂದಿ ಗಾಯಗೊಂಡಿರುವುದು ವಿಷಾದಕರ ಹಾಗೂ ಆತಂಕಕಾರಿ” ಎಂದು ಟ್ವೀಟ್​ ಮಾಡಿದ್ದಾರೆ,(ಏಜೆನ್ಸೀಸ್).
IPL 2024, CSK vs RCB: ಮೊದಲ ಪಂದ್ಯ ಸೋತರೂ ಆರ್​​ಸಿಬಿ ಫ್ಯಾನ್ಸ್​ ಕುಗ್ಗಲ್ಲ! ಬದಲಿಗೆ ಹೇಳೋದು ಮಾತ್ರ ಇದೊಂದೇ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 2 =
Remember me
