ಲಕ್ನೋ:ಐದು ರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹೊರತುಪಡಿಸಿ ಬಿಜೆಪಿಯ ಎಲ್ಲಾ ಪ್ರಮುಖರ ಪೈಕಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ಅಭ್ಯರ್ಥಿಗಳಿಂದ ಯುಪಿ ಬಿಜೆಪಿಯ ರಾಜ್ಯ ಕೇಂದ್ರ ಕಚೇರಿಯಲ್ಲಿ ಯೋಗಿ ಸಭೆಗೆ ಬೇಡಿಕೆಯ ಮಹಾಪೂರವೇ ಹರಿದು ಬರುತ್ತಿದೆ.
ಇದನ್ನೂ ಓದಿ:ಮತ್ತೊಮ್ಮೆ ಕನ್ನಡದಲ್ಲಿ ಬಾಬಿ ಸಿಂಹ ; ರಘು ಕೋವಿ ನಿರ್ದೇಶಿಸುತ್ತಿರುವ ಚಿತ್ರದಲ್ಲಿ ತಮಿಳು ನಟ
ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಈಶಾನ್ಯ ರಾಜ್ಯ ಮಿಜೋರಾಂನಿಂದಲೂ ಬಿಜೆಪಿ ಅಭ್ಯರ್ಥಿಗಳು ಸಿಎಂ ಯೋಗಿ ಅವರನ್ನು ಭೇಟಿಯಾಗುವಂತೆ ಮನವಿ ಮಾಡುತ್ತಿದ್ದಾರೆ. ಮುಂದಿನ 20 ದಿನಗಳಲ್ಲಿ 65 ಪ್ರಚಾರ ಸಭೆಗಳನ್ನು ಉದ್ದೇಶಿಸಿ ಯೋಗಿ ಆದಿತ್ಯನಾಥ್ ಮಾತನಾಡಲಿದ್ದಾರೆ.
ಯುಪಿ ಬಿಜೆಪಿ ನಾಯಕರ ಪ್ರಕಾರ, ಸಿಎಂ ಯೋಗಿ ಮುಂದಿನ 20 ದಿನಗಳಲ್ಲಿ ಐದು ರಾಜ್ಯಗಳಲ್ಲಿ 65 ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ಮಧ್ಯಪ್ರದೇಶದಲ್ಲಿ ಗರಿಷ್ಠ 25 ಮತ್ತು ರಾಜಸ್ಥಾನದಲ್ಲಿ 22 ಚುನಾವಣಾ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಛತ್ತೀಸ್‌ಗಢ ಬಿಜೆಪಿ ರಾಜ್ಯ ಘಟಕವು ಸಿಎಂ ಯೋಗಿ ಅವರನ್ನು ಹೆಚ್ಚಿನ ರ್ಯಾಲಿಗಳಿಗೆ ಮನವಿ ಮಾಡಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಆರ್ಮುಗಂ ರವಿಶಂಕರ್​ ಪುತ್ರ ಈಗ ಹೀರೋ ! ಮಗ ಅದ್ವೈ ಚಿತ್ರಕ್ಕೆ ಅಪ್ಪನೇ ನಿರ್ದೇಶಕ..
ಮಿಜೋರಾಂನ ಬಿಜೆಪಿ ಅಭ್ಯರ್ಥಿಗಳು ಕೂಡ ಪ್ರಚಾರ ಸಭೆಗಳಿಗೆ ಯೋಗಿಗೆ ಬೇಡಿಕೆ ಇಟ್ಟಿದ್ದಾರೆ. ಚುನಾವಣಾ ಕಣದಲ್ಲಿರುವ ಮಿಜೋರಾಂನಲ್ಲಿ ಯೋಗಿ ಅವರ ಕನಿಷ್ಠ ಮೂರು ಸಭೆಗಳು ನಡೆಯಬಹುದು ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳಿಗಾಗಿ ಮಿಜೋರಾಂನಲ್ಲಿ ರೋಡ್ ಶೋ ನಡೆಸುವ ನಿರೀಕ್ಷೆಯಿದೆ. ತೆಲಂಗಾಣದಲ್ಲಿ ಹೈದರಾಬಾದ್‌ನ ಬಿಜೆಪಿ ಅಭ್ಯರ್ಥಿಗಳು ಕೂಡ ಯೋಗಿಯ ಸಭೆಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ,(ಏಜೆನ್ಸೀಸ್).
ನದಿಗೆ ಜಿಗಿದ ಕಾರು; 6 ಆದಿ ಕೈಲಾಸ ಯಾತ್ರಿಕರು ಮೃತ್ಯು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − one =
Remember me
