ಹೈದರಾಬಾದ್​:ತೆಲಂಗಾಣದ ರಾಜಧಾನಿ ಹೈದರಾಬಾದ್​ನಲ್ಲಿ ಇನ್ನು 10 ರಿಂದ 15 ದಿನಗಳಲ್ಲಿ ಶೇ. 100 ರಷ್ಟು ಕರೊನಾ ಲಸಿಕಾಕರಣ ಸಾಧಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಈ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್​ ತಿಳಿಸಿದ್ದಾರೆ.
ಈ ಸಂಬಂಧವಾಗಿ ನಿನ್ನೆ ಹೈದರಾಬಾದ್​ನಲ್ಲಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದ ಸೋಮೇಶ್ ಕುಮಾರ್,​ ಹೈದರಾಬಾದ್​ ನಗರಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಮೊಬೈಲ್​ ಲಸಿಕಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ ಎಂದರು. ಆರೋಗ್ಯ ಇಲಾಖೆ ಮತ್ತು ಪಾಲಿಕೆ ಸಿಬ್ಬಂದಿಗಳಿಗೆ ಬಡಾವಣೆವಾರು ಮನೆಯಿಂದ ಮನೆಗೆ ಹೋಗಿ ಲಸಿಕೆಗೆ ಅರ್ಹರಾಗಿದ್ದು ಈವರೆಗೆ ಪಡೆದಿಲ್ಲದ 18 ವರ್ಷ ಮೇಲ್ಪಟ್ಟ ನಾಗರೀಕರನ್ನು ಗುರುತಿಸಿ, ಲಸಿಕೆ ನೀಡಬೇಕೆಂದು ಸೂಚಿಸಿದರು.
ಇದನ್ನೂ ಓದಿ:ಕರೊನಾ: 150 ದಿನಗಳಲ್ಲಿ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳು
ಗ್ರೇಟರ್​ ಹೈದರಾಬಾದ್​ ಮುನಿಸಿಪಲ್ ಕಾರ್ಪೊರೇಷನ್​ನಿಂದ ಕೈಗೊಳ್ಳಲಾಗಿರುವ ಮೊಬೈಲ್​ ಲಸಿಕಾ ಅಭಿಯಾನದಡಿ 175 ಮೊಬೈಲ್​ ಲಸಿಕಾಕರಣ ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಇವು ತಂತಮ್ಮ ಕ್ಷೇತ್ರಗಳ ಅರ್ಹ ವಯೋಮಾನದ ಜನರಿಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ರವರೆಗೆ ನಿಯಮಿತವಾಗಿ ಲಸಿಕೆ ನೀಡುವ ಕೆಲಸ ಮಾಡುತ್ತಿವೆ. ಇದಲ್ಲದೆ ಎಂದಿನ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ಲಸಿಕಾಕರಣ ಭರದಿಂದ ಸಾಗಿದೆ ಎನ್ನಲಾಗಿದೆ.(ಏಜೆನ್ಸೀಸ್)
ಕರೊನಾ ಲಸಿಕೆಯ 2ನೇ ಡೋಸ್​ ಮಿಸ್​ ಮಾಡಿಕೊಂಡವರು ಎಷ್ಟು ಜನ ಗೊತ್ತಾ?!

ಆ.23 ರಿಂದ ರಾಜ್ಯದಲ್ಲಿ ಭಾರೀ ಮಳೆ! ದಕ್ಷಿಣ ಒಳನಾಡಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + six =
Remember me
