ಬೆಂಗಳೂರು:ಕೋವಿಡ್ ಮೂರನೇ ಅಲೆ ಇಳಿಕೆಯಾಗಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮಾ. 16ರಿಂದ ದೇಶಾದ್ಯಂತ 12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ನಿರ್ಧರಿಸಲಾಗಿದೆ. ವೈಜ್ಞಾನಿಕ ಸಂಸ್ಥೆಗಳು, ತಜ್ಞರ ಜತೆ ಚರ್ಚೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಸ್ತುತ ನಡೆಯುತ್ತಿರುವ ಕೋವಿಡ್ ಲಸಿಕೆ ಕಾರ್ಯಕ್ರಮದ ಅಡಿಯಲ್ಲಿ 14 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಈಗಾಗಲೇ ಕೋವಿಡ್ ಲಸಿಕೆ ನೀಡಲಾಗುತ್ತಿದೆ.
10.20 ಕೋಟಿ ಡೋಸ್:ರಾಜ್ಯದಲ್ಲಿ ಈವರೆಗೂ 5,22,02,086 ಮಂದಿಗೆ ಮೊದಲ ಡೋಸ್, 4,85,95,407 ಮಂದಿಗೆ ಎರಡನೇ ಡೋಸ್, 12,71,556 ಮಂದಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ.
24 ಲಕ್ಷ ಮಕ್ಕಳಿಗೆ ಮೊದಲ ಡೋಸ್:ರಾಜ್ಯದಲ್ಲಿ 15-17 ವರ್ಷದ 24,48,405 ಮಕ್ಕಳಿಗೆ ಮೊದಲ ಡೋಸ್ ಲಸಿಕೆ ವಿತರಿಸಲಾಗಿದ್ದು, 18,88,653 ಮಕ್ಕಳು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. 7,60,490 ಮಂದಿಗೆ ಬೂಸ್ಟರ್ ಡೋಸ್ ನೀಡಲಾಗಿದೆ.
60 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ:ಸದ್ಯ ಆರೋಗ್ಯ ಸಮಸ್ಯೆ ಹೊಂದಿದ್ದ 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಮುನ್ನೆಚ್ಚರಿಕೆ ಡೋಸ್ ವಿತರಿಸಲಾಗುತ್ತಿತ್ತು. ಇದೀಗ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕೆ ಡೋಸ್ ವಿಸ್ತರಿಸಲಾಗಿದೆ.
ಹುಬ್ಬಳ್ಳಿಯಲ್ಲಿ ಅಪ್ಪು ಬೆಳಕು; ಪುನೀತ್ ಜನ್ಮದಿನಂದು ಬೃಹತ್ ನೇತ್ರದಾನ ವಾಗ್ದಾನ ಶಿಬಿರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + twelve =
Remember me
