ಲಖನೌ:ವಿಶ್ವದಾದ್ಯಂತ ಇಂದು ಪ್ರೇಮಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಹಲವರು ತಮ್ಮ ನೆಚ್ಚಿನವರ ಬಳಿ ಪ್ರೀತಿಯನ್ನು ವಿನಿಮಯ ಮಾಡಿಕೊಂಡಿದ್ದಾರೆ. ಆದರೆ, ಮನೆಯವರು ತಮ್ಮ ಪ್ರೀತಿಗೆ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಸುರೀಂದರ್ ಸಿಂಗ್ (20) ಹಾಗೂ ಸೀಮಾ (19) ಎಂದು ಗುರುತಿಸಲಾಗಿದ್ದು, ಇಬ್ಬರು ಮಹೋಬಾ ಜಿಲ್ಲೆಯ ಚರಖಾರಿಯ ಕನೆಲಾ ಗ್ರಾಮದವರು ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.
महोबा : 14 फरवरी वेलेन्टाइन डे पर प्रेमी जोड़े ने खाया जहरप्रेमी जोड़े ने जहर खाकर दी जानवेलेन्टाइन डे पर खाई थी दोनों ने मरने की कसमेंइंटर की छात्रा सीमा और छात्र सुरेंद्र ने घर में खाया जहरप्रेमी जोड़े द्वारा उठाए कदम से पुलिस और परिजन हैरानचरख़ारी कोतवाली क्षेत्र के…pic.twitter.com/qtqMbWSfY0
ಇದನ್ನೂ ಓದಿ:4 ಎಸೆತಗಳಲ್ಲಿ 4 ವಿಕೆಟ್​; ರಣಜಿ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಆರ್​ಸಿಬಿ ಮಾಜಿ ಪ್ಲೇಯರ್
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಫೆಬ್ರವರಿ 14ರಂದು ಬೆಳಗ್ಗೆ ಸುರಿಂದರ್​ ಹೊಲಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದಾನೆ. ಬಳಿಕ ಊರಿನ ಮುಂಭಾಗದಲ್ಲಿರುವ ಸೇತುವೆ ಬಳಿ ವಿಷ ಸೇವಿಸಿ ವಿಚಾರವನ್ನು ತನ್ನ ಪ್ರಿಯತಮೆಗೆ ದೂರವಾಣಿ ಮೂಲಕ ತಿಳಿಸಿದ್ದಾನೆ. ವಿಚಾರ ತಿಳಿದ ಯುವತಿ ತಕ್ಷಣವೇ ವಿಷ ಸೇವಿಸಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗ್ಗೆ 7 ಘಂಟೆ ಸುಮಾರಿಗೆ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಹಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − seven =
Remember me
