ನವದೆಹಲಿ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಉತ್ತರ ದೆಹಲಿಯಲ್ಲಿ ನಡೆದಿದೆ.
ಮೃತರನ್ನು ಸವಿತಾ(55) ಎಂದು ತಿಳಿದು ಬಂದಿದ್ದು, ಇನ್ನಿಬ್ಬರ ಗುರುತು ಪತ್ತೆಯಾಗಬೇಕಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಘಟನೆಯೂ ಮಧ್ಯಾಹ್ನ 12:30ರ ಸುಮಾರಿಗೆ ನಡೆದಿದ್ದು, ಕಾರಿನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು. ಭಜನ್​ಪುರ ನಂದ ನಗರಿ ಕಡೆಯಿಂದ ಬರುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದು ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಉಚಿತ ಬಸ್​ ಪ್ರಯಾಣದ ಆಸೆಗೆ ಬಿದ್ದು ಬುರ್ಖಾ ತೊಟ್ಟು ತಗ್ಲಾಕೊಂಡ ಪ್ರಯಾಣಿಕ
ಎದುರು ಬರುತ್ತಿದ್ದ ಬಸ್ಗೆ ಕಾರು​ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + ten =
Remember me
