ವಾರಣಾಸಿ:ಶುಕ್ರವಾರ (ಸೆ.09) ಲಾಲ್ ಬಹದ್ದೂರ್ ಶಾಸ್ತ್ರಿ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ ಕರೆ ಬಂದಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ನನ್ನನ್ನು ಸಚಿವನನ್ನಾಗಿ ಮಾಡದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿಪ್ರಸಾದ್​ ವಾಗ್ದಾಳಿ
ಏರ್​ಪೋರ್ಟ್​ನ ಅಧಿಕಾರಿಯೊಬ್ಬರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದರಿಂದ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ತೀವ್ರ ಭಯಭೀತರಾಗಿದ್ದರು. ಅಶೋಕ್ ಎಂಬ ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿ, ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ.
ಬೆದರಿಕೆ ಕರೆಯ ಬೆನ್ನಲ್ಲೇ, ಸಿಐಎಸ್ಎಫ್ ಸಿಬ್ಬಂದಿ ವಿಮಾನ ನಿಲ್ದಾಣದ ಮೂಲೆ ಮೂಲೆಗಳಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ. ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಸ್ಥಳೀಯ ಪೊಲೀಸ್ ಠಾಣೆಗೆ ಲಿಖಿತ ದೂರು ಕೂಡ ನೀಡಿದ್ದಾರೆ. ಉತ್ತರ ಪ್ರದೇಶದ ಭದೋಹಿ ಮೂಲದಿಂದ ಕರೆ ಬಂದಿದೆ ಎಂಬುದನ್ನು ಪತ್ತೆ ಹಚ್ಚಿದ ಪೊಲೀಸರು, ಸದ್ಯ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು 25 ವರ್ಷದ ಅಶೋಕ್ ಪ್ರಜಾಪತಿ ಎಂದು ಗುರುತಿಸಲಾಗಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 503ರ ಅಡಿಯಲ್ಲಿ ಆತನನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಅಮೆರಿಕಾದಲ್ಲಿ ಹೆಚ್ಚಾಯ್ತು ದಳಪತಿ ವಿಜಯ್​ ಕ್ರೇಜ್​; 24 ಗಂಟೆಯೊಳಗೆ ಸೇಲಾಯ್ತು 10,000ಕ್ಕೂ ಅಧಿಕ ಟಿಕೆಟ್!
ಅಶೋಕ್ ಅವರ ಕುಟುಂಬದ ಪ್ರಕಾರ, ಅಶೋಕ್ ಏಪ್ರಿಲ್‌ನಿಂದ ವಾರಣಾಸಿಯ ಮನೋವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಫುಲ್‌ಪುರ ಪೊಲೀಸ್ ಠಾಣೆ ಪ್ರಭಾರಿ ದೀಪಕ್ ಕುಮಾರ್ ರಾಣಾವತ್ ಹೇಳಿದ್ದಾರೆ,(ಏಜೆನ್ಸೀಸ್).
2024ಕ್ಕೆ ಪ್ರಭಾಸ್​ ನಟನೆಯ ‘ಸಲಾರ್’​ ರಿಲೀಸ್​?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − 19 =
Remember me
