ಬೆಂಗಳೂರು:ವಾಸನ್​ ಐ ಕೇರ್​ ಸಂಸ್ಥಾಪಕ ಎ.ಎಂ. ಅರುಣ್​ (51) ಸೋಮವಾರ ನಿಗೂಢವಾಗಿ ಮೃತಪಟ್ಟಿದ್ದಾರೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಸಾವಿನ ಕುರಿತು ಸಂಬಂಧಿಕರು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಅರುಣ್​ ಸಾವಿನ ಬಗ್ಗೆ ಸಂಬಂಧಿಕರು ಆತ್ಮಹತ್ಯೆ ಅನುಮಾನ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಚೆನ್ನೈನ ತೇನ್ಯಂಪೇಟ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ಇದೊಂದು ಸಹಜ ಸಾವಾಗಿದ್ದು, ಆತ್ಮಹತ್ಯೆ ಅಥವಾ ಕೊಲೆ ಕುರಿತು ಯಾವುದೇ ಸುಳಿವು ಕಾಣಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅರುಣ್​ ಅವರಿಗೆ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾಂಗ್ರೆಸ್​ ಸಂಸದ ಕಾರ್ತಿ ಚಿದಂಬರಂ ಜತೆ ನಿಕಟ ಸಂಬಂಧವಿದೆ. ಅಲ್ಲದೆ ಚಿದಂಬರಂ ತಮ್ಮ ಬ್ಲ್ಯಾಕ್​ ಮನಿ ವೈಟ್​ ಮಾಡಲು ವಾಸನ್​ ಐ ಕೇರ್​ ಸಂಸ್ಥೆಯನ್ನು ಬಳಸಿಕೊಂಡು ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪವೂ ಇದೆ. 2015ರಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಚೆನ್ನೈನಲ್ಲಿರುವ ಅರುಣ್ ಮನೆ ಹಾಗೂ ಮೈಲಾಪುರದಲ್ಲಿರುವ ವಾಸನ್​ ಐ ಕೇರ್​ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿತ್ತು. ಜಾರಿ ನಿರ್ದೇಶನಾಲಯ ಕೂಡ ಸಂಸ್ಥೆಯ ಆರ್ಥಿಕ ಚಟುವಟಿಕೆಗಳನ್ನು ಪರಿಶೀಲಿಸಿತ್ತು. ಈ ಹಿನ್ನೆಲೆಯಲ್ಲಿ ಇವರ ಸಾವು ಹಾಗೂ ಸಂಬಂಧಿಕರ ಅನುಮಾನ ಎಲ್ಲ ಸೇರಿ ಪ್ರಕರಣದ ಕುರಿತು ಕುತೂಹಲ ಉಂಟಾಗಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 4 =
Remember me
