ಜೈಪುರ:ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಪಕ್ಷಾಂತರ ಪರ್ವ ಕೂಡ ಜೋರಾಗಿ ನಡೆಯುತ್ತಿದೆ. ಆಡಳಿತರೂಢ ಕಾಂಗ್ರೆಸ್​ ಚುನಾವಣೆಯಲ್ಲಿ ಗೆದ್ದು ಎರಡನೇ ಅವಧಿಗೆ ಸರ್ಕಾರವನ್ನು ರಚಿಸುವ ಹುಮ್ಮಸ್ಸಿನಲ್ಲಿದೆ. ಇತ್ತ ಬಿಜೆಪಿ ಕಾಂಗ್ರೆಸ್​ನ ಒಳಜಗಳವನ್ನೇ ಲಾಭ ಮಾಡಿಕೊಂಡು ಚುನಾವಣೆ ಎದುರಿಸಲು ಸಿದ್ದವಾಗಿದೆ.
ಇದೀಗ ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೇ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೈಪುರದಲ್ಲಿ ಕಾನ್ಸ್ಟಿಟ್ಯೂಶನ್ ಕ್ಲಬ್ ಉದ್ಘಾಟನೆಯಲ್ಲಿ ಈ ಇಬ್ಬರು ನಾಯಕರು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಈ ಇಬ್ಬರು ನಾಯಕರು ಭೇಟಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಇವರ ಜೊತೆ ರಾಜಸ್ಥಾನ ವಿಧಾನಸಭೆಯ ಸ್ಪೀಕರ್ ಡಾ.ಸಿ.ಪಿ. ಜೋಶಿ, ವಿಪಕ್ಷ ನಾಯಕ ರಾಜೇಂದ್ರ ರಾಥೋಡ್​ ಉಪಸ್ಥಿತರಿದ್ದರು. ಆದರೆ, ವಸುಂಧರಾ ರಾಜೇ ಪ್ರತ್ಯೇಕವಾಗಿ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಪಕ್ಷಾಂತರಕ್ಕೆ ಪುಷ್ಠಿ ನೀಡಿದೆ.
pic.twitter.com/zWxeQB0xlj
ಇದನ್ನೂ ಓದಿ:ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ KKRTC ಬಸ್; ಇಬ್ಬರು ಮೃತ್ಯು
ಇತ್ತೀಚಿನ ದಿನಗಳಲ್ಲಿ ತಮ್ಮನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ವಸುಂಧರಾ ರಾಜೇ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ಧಾರೆ. ರಾಜಸ್ಥಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರಯಲ್ಲಿ ವಸುಂಧರಾ ರಾಜೇ ಕಾಣಿಸಿಕೊಳ್ಳದೆ ಅಂತರವನ್ನು ಕಾಯ್ದುಕೊಂಡಿದ್ದರು. ಸ್ವಕ್ಷೇತ್ರ ಜಲವಾರ್​ನಲ್ಲಿ ನಡೆದ ಕಾರ್ಯಕ್ರಮದಿಂದಲೂ ಭಾಗವಹಿಸದೆ ದೂರ ಉಳಿದಿದ್ದರು.
ಈಚೆಗೆ ಪ್ರಕಟವಾದ ಬಿಜೆಪಿ ಉಸ್ತುವಾರಿಗಳ ಪಟ್ಟಿಯಲ್ಲಿ ವಸುಂಧರಾ ರಾಜೇ ಹಾಗೂ ವಿಪಕ್ಷ ನಾಯಕ ರಾಜೇಂದ್ರ ರಾಥೋಡ್​ ಅವರ ಹೆಸರನ್ನು ಕೈಬಿಡಲಾಗಿತ್ತು. ಈ ಬೆಳವಣಿಗೆಯ ನಂತರ ಈ ಇಬ್ಬರು ನಾಯಕರು ಬಿಜೆಪಿಯಿಂದ ಅಂತರವನ್ನು ಕಾಯ್ದುಕೊಳ್ಳಲು ಶುರು ಮಾಡಿದ್ದರು. ಮುಂದಿನ ದಿನಗಳಲ್ಲಿ ಇವರ ನಡೆ ಬಿಜೆಪಿಗೆ ವರದಾನವಾಗಲಿದೆಯಾ ಅಥವಾ ಶಪವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 1 =
Remember me
