ಜೈಪುರ:ಆಘಾತಕಾರಿ ಘಟನೆಯೊಂದರಲ್ಲಿ ತರಕಾರಿ ವ್ಯಾಪಾರಿಯನ್ನು ಪೊಲೀಸ್​ ಅಧಿಕಾರಿಯ ಮಗನೊಬ್ಬ ಅಮಾನುಷವಾಗಿ ಹೊಡೆದ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದ ಕರಣಿ ವಿಹಾರ್ ಪ್ರದೇಶದಲ್ಲಿ ನಡೆದಿದೆ. ಘಟನೆ ಮಂಗಳವಾರ ರಾತ್ರಿ 10:30ರ ಸುಮಾರಿಗೆ ನಡೆದಿದ್ದು. ಇದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಆರೋಪಿ ತನ್ನ ಕೈಯಲ್ಲಿ ಬ್ಯಾಟ್ ಹಿಡಿದುಕೊಂಡು ಮನನೆಯಿಂದ ಹೊರಬಂದು ಸಂತ್ರಸ್ತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಾನೆ. ಸಂತ್ರಸ್ತ ಸಹಾಯಕ್ಕೆ ಅಂಗಲಾಚಿದರೂ ಸಹ ಯಾರೂ ಆತನ ನೆರವಿಗೆ ಧಾವಿಸುವುದಿಲ್ಲ. ತೀವ್ರ ರಕ್ತಸ್ರಾವದಿಂದ ಆತ ಕೆಳಗೆ ಬಿದ್ದರೂ ಸುಮ್ಮನಾಗದ ಆರೋಪಿ ಆತನ ಮೇಲೆ ಹಲ್ಲೆ ಬ್ಯಾಟಿನಿಂದ ಹೊಡೆಯುತ್ತಿರುತ್ತಾನೆ. ಈ ವೇಳೆ ಸ್ಥಳದಲ್ಲಿದ್ದ ಆರೋಪಿಯ ತಂದೆ ಸುಮ್ಮನೆ ನಿಂತಿರುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜೈಪುರ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಯಾವ ಕಾರಣಕ್ಕೆ ಆರೋಪಿ ಸಂತ್ರಸ್ತನ ಮೇಲೆ ಹಲ್ಲೆ ಮಾಡಿದ ಎಂದು ಈವರೆಗೆ ತಿಳಿದು ಬಂದಿಲ್ಲ. ಸಂತ್ರಸ್ತನ ಮೇಲೆ ಹಲ್ಲೆ ಮಾಡಿದ ಬಳಿಕ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮೃತನ ಕುಟುಂಬಸ್ಥರು ನೀಡಿದ ದೂರನ್ನು ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಶೀಘ್ರದಲ್ಲೇ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು ಜೈಪುರ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
