ನವದೆಹಲಿ:ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತಸಂಘಟನೆಗಳು ಇಂದು ನಡೆಸುತ್ತಿರುವ ಭಾರತ್ ಬಂದ್​ನ ಬಿಸಿ ದೇಶದ ರಾಜಧಾನಿ ದೆಹಲಿಯ ಜನರಿಗೆ ಹೆಚ್ಚಾಗಿ ತಾಗುತ್ತಿದೆ. ಇಂದು ಬೆಳಿಗ್ಗೆಯಿಂದಲೇ ದೆಹಲಿಯ ಗಡಿಭಾಗಗಳಲ್ಲಿ ಭಾರೀ ಪ್ರಮಾಣದ ಟ್ರಾಫಿಕ್​ ಜ್ಯಾಮ್​ಗಳು ಏರ್ಪಟ್ಟಿರುವುದು ವರದಿಯಾಗಿದೆ.
ಸಂಯುಕ್ತ ಕಿಸಾನ್​​ ಮೋರ್ಚಾ ವೇದಿಕೆಯಡಿ 40 ರೈತ ಸಂಘಟನೆಗಳು ಒಟ್ಟಾಗಿ, ಇಂದು ಬೆಳಿಗ್ಗೆ 6 ರಿಂದ ಸಂಜೆ 4 ರವರೆಗೆ ಬಂದ್​ಗೆ ಕರೆ ನೀಡಿವೆ. ಸರ್ಕಾರಿ ಕಛೇರಿಗಳು, ಶಾಲೆ-ಕಾಲೇಜು, ವ್ಯಾಪಾರ-ವಹಿವಾಟುಗಳನ್ನು ನಡೆಸದಂತೆ ಆಗ್ರಹಿಸಿವೆ. ವಿವಾದಿತ ಕಾನೂನುಗಳನ್ನು ಅನುಷ್ಠಾನಗೊಳಿಸಿದರೆ, ಕೃಷಿ ಕ್ಷೇತ್ರವನ್ನು ಖಾಸಗಿ ಕಂಪೆನಿಗಳ ಹಿಡಿತಕ್ಕೆ ಒಳಗಾಗಲಿವೆ ಎಂಬುದು ಪ್ರತಿಭಟನಾಕಾರರ ವಾದವಾಗಿದೆ.
ಇದನ್ನೂ ಓದಿ:ಬೆಂಗಳೂರಲ್ಲಿ ಬೀದಿಗಿಳಿದ ರೈತ ಸಂಘಟನೆಗಳು, ಎಲ್ಲೆಡೆ ಪೊಲೀಸ್​ ಬಂದೋಬಸ್ತ್
ಇಂದು ಬೆಳಿಗ್ಗೆಯಿಂದಲೇ, ಮುಖ್ಯವಾಗಿ ರೈತರ ಪ್ರತಿಭಟನಾ ಧರಣಿ ನಡೆಯುತ್ತಿರುವ ಘಾಜಿಪುರ ಗಡಿ ಬಳಿಯ ದೆಹಲಿ-ಮೀರತ್​ ಎಕ್ಸ್​ಪ್ರೆಸ್​ವೇ ಬ್ಲಾಕ್​ ಆಗಿತ್ತು. ಇದರಿಂದಾಗಿ ಉತ್ತರ ಪ್ರದೇಶದ ಕಡೆಯಿಂದ ಬರುವ ವಾಹನಗಳು ಸಿಕ್ಕಿಹಾಕಿಕೊಂಡಿದ್ದವು. ದೆಹಲಿಯ ಗುರ್​ಗಾವ್​ ಮತ್ತು ನಾಯ್ಡ ಗಡಿಗಳಲ್ಲಿಯೂ ಭಾರೀ ಜ್ಯಾಮ್​ ಕಂಡುಬಂದಿದ್ದು, ವಾಹನಗಳ ಸಾಲು ರಸ್ತೆಗಳನ್ನು ಆವರಿಸಿವೆ. ಪಂಜಾಬ್​​ ಮತ್ತು ಹರಿಯಾಣದ ಕಡೆಗಿನ ಶಂಭು ಗಡಿ ಕೂಡ ಬ್ಲಾಕ್​ ಆಗಿದೆ ಎನ್ನಲಾಗಿದೆ.
ಆದಾಗ್ಯೂ ನಗರದ ಒಳಗೆ ಆಟೋರಿಕ್ಷಾಗಳು, ಟ್ಯಾಕ್ಸಿಗಳು ಸಾಮಾನ್ಯದಂತೆಯೇ ಓಡುತ್ತಿವೆ ಮತ್ತು ವ್ಯಾಪಾರ ಮಳಿಗೆಗಳು ತೆರೆದಿವೆ. ಹಲವು ವ್ಯಾಪಾರಿ ಸಂಘಟನೆಗಳು ಬಂದ್​​ಗೆ ಕೇವಲ ಸೈದ್ಧಾಂತಿಕ ಬೆಂಬಲವನ್ನು ಮಾತ್ರ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನು, ಮುನ್ನೆಚ್ಚರಿಕೆಯಾಗಿ ನಗರದ ಮತ್ತು ವಿವಿಧೆಡೆಯ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ.
ಇದನ್ನೂ ಓದಿ:ಭಾರತ್​ ಬಂದ್​ಗೆ ಎಮ್ಮೆ-ಕತ್ತೆಗಳನ್ನ ಕರೆತಂದು ಪ್ರತಿಭಟನೆ
ಕೆಲವು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಧರಣಿ ಸೇರಿದಂತೆ ಶಾಂತ ಪ್ರತಿಭಟನೆ ನಡೆಸುವುದಾಗಿ ರೈತಮುಖಂಡರು ಹೇಳಿದ್ದಾರೆ. ಪ್ರತಿಭಟನಾಕಾರರು ನಗರದೊಳಕ್ಕೆ ಪ್ರವೇಶಿಸದಂತೆ ಮತ್ತು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ದೆಹಲಿ ಪೊಲೀಸರೊಂದಿಗೆ, ಹೆಚ್ಚಿನ ಸಂಖ್ಯೆಯಲ್ಲಿ ಪ್ಯಾರಾಮಿಲಿಟರಿ ಜವಾನ್​ರನ್ನೂ ಗಡಿಗಳಲ್ಲಿ ನಿಯುಕ್ತಿಗೊಳಿಸಲಾಗಿದೆ ಎನ್ನಲಾಗಿದೆ.(ಏಜೆನ್ಸೀಸ್)
ಔಷಧ ತಗೊಂಡು ಮಲಗಿದ್ದವಳ ಲೈಂಗಿಕ ಶೋಷಣೆ: ವಾಯುಸೇನೆ ಅಧಿಕಾರಿ ಬಂಧನ

ಬಿಜೆಪಿ ಸಂಸದರನ್ನು ಥಳಿಸಿದ ಜನ: ಕಾಂಗ್ರೆಸ್​ ನಾಯಕರ ಚಿತಾವಣೆ ಆರೋಪ

ಲಸಿಕೆ ತಯಾರಿಕೆ ಸಾಮರ್ಥ್ಯ ಹೆಚ್ಚಿಸಿಕೊಂಡ ಭಾರತಕ್ಕೆ ಬಿಲ್​ ಗೇಟ್ಸ್​ ಪ್ರಶಂಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 4 =
Remember me
