ನವದೆಹಲಿ:ಗಡಿಯಲ್ಲಿ ಭಾರತ-ಚೀನಾ ಸಂಘರ್ಷ ಉಲ್ಬಣವಾದಾಗಿನಿಂದ ಕಾಂಗ್ರೆಸ್​ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.
ಇದೀಗ ಮತ್ತೊಮ್ಮೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ದೂಷಿಸಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗಡಿ ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಅದು ಬಿಟ್ಟು ದೇಶದೊಳಗೆ ಕಾಂಗ್ರೆಸ್​ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದೆ.ಈ ಬಾರಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಕಾಂಗ್ರೆಸ್​ ಮುಖಂಡ ಮನೀಶ್​ ತಿವಾರಿ. ಟ್ವೀಟ್​ ಮಾಡಿರುವ ಅವರು, ಕೇಂದ್ರ ಸರ್ಕಾರ, ಗಡಿಯಲ್ಲಿ ಕ್ಯಾತೆ ತೆಗೆಯುತ್ತಿರುವ ಚೀನಾವನ್ನು ಟಾರ್ಗೆಟ್ ಮಾಡುವುದು ಬಿಟ್ಟು ಕಾಂಗ್ರೆಸ್​ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಅಹ್ಮದ್​ ಪಟೇಲ್​ ಅವರಿಗೆ ನಿರಂತರವಾಗಿ ಕಿರುಕುಳ ಮಾಡುತ್ತ, ಅವರ ಮೇಲೆ ದಬ್ಬಾಳಿಕೆ ಮಾಡುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್​ ಮುಖಂಡ ಅಹ್ಮದ್ ಪಟೇಲ್​ ಅವರನ್ನು ಇ.ಡಿ. ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಮನೀಶ್​ ತಿವಾರಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.  ಇತ್ತೀಚೆಗಷ್ಟೇ ರಾಹುಲ್​ ಗಾಂಧಿಯವರೂ ಕೂಡ ಕೇಂದ್ರ ಸರ್ಕಾರದ ವಿರುದ್ಧ ದ್ವೇಷ ರಾಜಕಾರಣದ ಆರೋಪ ಹೊರೆಸಿದ್ದರು.
ಶ್ರೀದೇವಿ ಪೋಸ್ಟ್​ ಮಾರ್ಟಮ್​ ರಿಪೋರ್ಟ್​ ಬಿಡುಗಡೆ ಮಾಡಿದರಾ ಕಂಗನಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
