ವಾರಣಾಸಿ:ಟೊಮೊಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ಉತ್ತರಪ್ರದೇಶದ ವಾರಾಣಾಸಿಯಲ್ಲಿ ವರ್ತಕನೋರ್ವ ತನ್ನ ಅಂಗಡಿಯಲ್ಲಿರುವ ತರಕಾರಿಯನ್ನು ಕಾಯಲು ಬೌನ್ಸರ್​ಗಳನ್ನು ನೇಮಿಸಿ ದೇಶಾದ್ಯಂತ ಸುದ್ದಿಯಾಗಿದ್ದ. ಇನ್ನು ಹೊಸ ವಿಚಾರಕ್ಕೆ ಬರುವುದಾದರೆ ಆತ ಬೌನ್ಸರ್​ಗಳನ್ನು ನೇಮಿಸಿದ್ದು, ತರಕಾರಿ ಕಾಯಲು ಅಲ್ಲ ಬದಲಿಗೆ ಬೆಲೆಯೇರಿಕೆ ವಿರುದ್ಧ ಪ್ರತಿಭಟಿಸಲು ಎಂದು ತಿಳಿದು ಬಂದಿದೆ.
ರಾಜ್​​ನಾರಾಯಣ್​ ಎಂಬುವವರಿಗೆ ಸೇರಿದ ಅಂಗಡಿಯಲ್ಲಿ ಅಜಯ್​ ಫೌಜಿ ಎಂಬ ಹೆಸರಿನ ಸಮಾಜವಾದಿ ಪಕ್ಷದ ಮುಖಂಡ ನಿರಂತರ ಬೆಲೆಯೇರಿಕೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿ ವರಿಷ್ಠರ ಗಮನ ಸೆಳೆಯಲು ಹೋಗಿ ತರಕಾರಿ ವ್ಯಾಪಾರಿಯನ್ನು ಸಹ ಪೇಚಿಗೆ ಸಿಲುಕಿಸಿದ್ದಾನೆ.
ಈ ಕುರಿತು ಪೊಲೀಸರು ಅಂಗಡಿ ಮಾಲೀಕ ರಾಜ್​ ನಾರಾಯಣ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಜಯ್​ ಫೌಜಿ ಎಂಬಾತ ದಿಢೀರನೆ 500 ರೂಪಾಯಿ ಮೌಲ್ಯದ ಟೊಮೆಟೊ ಹಾಗೂ ಇಬ್ಬರು ಬೌನ್ಸರ್​ಗಳ ಜೊತೆ ಬಂದು ನನ್ನನ್ನು ಹೊರ ಕಳುಹಿಸಿ ಆತ ಕುಳಿತುಕೊಂಡು ವ್ಯಾಪಾರ ಮಾಡಲು ಶುರು ಮಾಡಿದ.
Earlier today, PTI tweeted a story about a vegetable vendor in Varanasi hiring bouncers in light of high price of tomatoes. It has since come to our notice that the vendor is a political party's worker, and his motive for giving us the information was questionable. We have,…
ಇದನ್ನೂ ಓದಿ:ಒಳ್ಳೆಯ ಮನುಷ್ಯನಾಗಲು ಕೇವಲ ಪ್ರತಿಭೆ, ಕೌಶಲಗಳಿದ್ದರೆ ಸಾಲದು: ಡಾ. ಸಿ.ಎನ್. ಮಂಜುನಾಥ್
ಬಳಿಕ ನನ್ನ ಅಂಗಡಿಯ ಸುತ್ತ ಬೆಲೆಯೇರಿಕೆ ಖಂಡಿಸಿ ಪ್ರತಿಭಟನೆ ಎಂಬ ಫಲಕಗಳನ್ನು ಅಂಟಿಸಿ ಘೋಷಣೆಗಳನ್ನು ಕೂಗಲು ಶುರು ಮಾಡಿದ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತರಕಾರಿ ಅಂಗಡಿ ಮಾಲೀಕ ರಾಜ್​ ನಾರಾಯಣ್​ ಪೊಲೀಸರಿಗೆ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮಾರಿಸಿಕೊಂಡಿರುವ ಆರೋಪಿ ಅಜಯ್​ ಫೌಜಿ, ಇಬ್ಬರು ಬೌನ್ಸರ್​ ಸೇರಿದಂತೆ ಓರ್ವನನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಿದ್ದಾರೆ. ಈ ರೀತಿ ಹುಚ್ಚಾಟ ಮೆರೆಯುವವರನ್ನು ಸುಮ್ಮನೇ ಬಿಡುವ ಮಾತಿಲ್ಲ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
