ನವದೆಹಲಿ :ಉಸಿರಾಟದಲ್ಲಿ ತೊಂದರೆ ಅನುಭವಿಸಿದ ಹಿನ್ನೆಲೆಯಲ್ಲಿ ಬಾಲಿವುಡ್​ ಹಿರಿಯ ನಟ ದಿಲೀಪ್​ ಕುಮಾರ್​ ಅವರನ್ನು ಇಂದು ಬೆಳಿಗ್ಗೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರೊನೇತರ ಚಿಕಿತ್ಸಾ ವಿಭಾಗದಲ್ಲಿ ಅವರ ತಪಾಸಣೆ ನಡೆಯುತ್ತಿದೆ ಎನ್ನಲಾಗಿದೆ.
ಈ ಬಗ್ಗೆ ಟ್ವಿಟರ್​ನಲ್ಲಿ ಮಾಹಿತಿ ನೀಡಿರುವ ಅವರ ಮ್ಯಾನೇಜರ್​, “ದಿಲೀಪ್​ ಸಾಹಬ್​ರನ್ನು ಹಿಂದೂಜಾ ಆಸ್ಪತ್ರೆಯ ನಾನ್​ಕೋವಿಡ್​ ಪಿಡಿಗೆ ಪರೀಕ್ಷೆ ಮತ್ತು ತಪಾಸಣೆಗಾಗಿ ದಾಖಲಿಸಲಾಗಿದೆ. ಅವರಿಗೆ ಆಗಾಗ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಳ್ಳುತ್ತಿತ್ತು. ಹೃಯಯ ಡಾ. ನಿತಿನ್ ಗೋಖಲೆ ಅವರ ನೇತೃತ್ವದ ವೈದ್ಯರ ತಂಡ ಆರೈಕೆ ನೀಡುತ್ತಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಹೇಳಿಬಿಡು ಹುಡುಗಿ… ನೀ ಚುಚ್ಚಿದ್ದು ನನ್ನ ತೋಳಿಗೋ, ಹೃದಯಕ್ಕೋ… ಅದು ಒಲವಿನ ಸೂಜಿಯೋ, ಮೊಂಡಾದದ್ದೊ?
ಹೃದ್ರೋಗ ತಜ್ಞ ಡಾ.ನಿತಿನ್ ಗೋಖಲೆ ಜೊತೆಗೆ ಶ್ವಾಸಕೋಶಶಾಸ್ತ್ರಜ್ಞ ಡಾ.ಜಲಿಲ್ ಪಾರ್ಕರ್ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎನ್ನಲಾಗಿದೆ. 98 ವರ್ಷದ ದಿಲೀಪ್​ಕುಮಾರ್​ ಅವರನ್ನು ಕಳೆದ ತಿಂಗಳಷ್ಟೆ ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಎರಡು ದಿನಗಳ ನಂತರ ಬಿಡುಗಡೆ ಮಾಡಲಾಗಿತ್ತು.(ಏಜೆನ್ಸೀಸ್)
ರೋಗಿಗಳ ಸೇವೆಯಲ್ಲಿ ನಿರತರಾಗಿದ್ದ 646 ವೈದ್ಯರು ಕರೊನಾಗೆ ಬಲಿ
ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಸೈಬರ್​ ಕಳ್ಳರ ಬ್ಯಾಂಕ್​ ಖಾತೆಗೆ ಖಾಕಿ ಲಾಕ್​! 112 ಅಥವಾ 100 ಗೆ ಕರೆ ಮಾಡಿ, ಹಣ ಉಳಿಸಿಕೊಳ್ಳಿ!




ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 3 =
Remember me
