ಭೋಪಾಲ್​:ಉತ್ತರಪ್ರದೇಶದ ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್​ ನಾಯಕ ಅಜೀಜ್​ ಖುರೇಷಿ (83) ಶುಕ್ರವಾರ (ಮಾರ್ಚ್​ 01) ನಿಧನರಾಗಿದ್ದಾರೆ.
ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಭೋಪಾಲ್​ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬೆಳಗ್ಗೆ 11 ಘಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಇಂದು (ಮಾರ್ಚ್​ 01) ಸಂಜೆ ಅವರ ಅಂತ್ಯೆಕ್ರಿಯೆ ಜರುಗಲಿದೆ ಎಂದು ಅವರ ಸಂಬಂಧಿ ಸೂಫಿಯಾನ್​ ಅಲಿ ತಿಳಿಸಿದ್ದಾರೆ.
ಈ ಹಿಂದೆ ಮಧ್ಯಪ್ರದೇಶ ಉರ್ದು ಅಕಾಡೆಮಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಖುರೇಷಿ 1972 ರಲ್ಲಿ ಮಧ್ಯಪ್ರದೇಶದ ಸೆಹೋರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1984ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಖುರೇಷಿ ಅವರು ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ಧಾರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 2 =
Remember me
