ನವದೆಹಲಿ:ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಪ್ರಧಾನಿ ಮೋದಿ ಅವರನ್ನು ಮಹಾತ್ಮ ಗಾಂಧಿ ಅವರಿಗೆ ಹೋಲಿಸಿದ್ದಕ್ಕೆ ಪ್ರತಿಪಕ್ಷಗಳು ಪ್ರಶ್ನೆಗಳನ್ನು ಎತ್ತಿದ್ದು, ಟೀಕೆ ಮಾಡಿವೆ. ಜಗದೀಪ್ ಅವರು ಸೋಮವಾರ ಮಹಾರಾಷ್ಟ್ರದ ಮುಂಬೈನಲ್ಲಿರುವ ಒಪೇರಾ ಹೌಸ್‌ಗೆ ಶ್ರೀಮದ್ ರಾಜಚಂದ್ರ ಅವರ ಜನ್ಮ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ್ದರು.
ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ ಮತ್ತು ಅಹಿಂಸೆಯ ಮೂಲಕ ಬ್ರಿಟಿಷರ ದಾಸ್ಯದಿಂದ ನಮ್ಮನ್ನು ಮುಕ್ತಗೊಳಿಸಿದ್ದಾರೆ. ನಾವು ಯಾವಾಗಲೂ ನೋಡಬಯಸುವ ಪ್ರಗತಿಯ ಪಥದಲ್ಲಿ ಪ್ರಧಾನಿ ಮೋದಿ ನಮ್ಮನ್ನು ಮುನ್ನಡೆಸಿದರು. ಮಹಾತ್ಮ ಗಾಂಧಿ ಮತ್ತು ಪಿಎಂ ಮೋದಿ ಇಬ್ಬರೂ ಶ್ರೀಮದ್ ರಾಜಚಂದ್ರಜಿಯವರ ಬೋಧನೆಗಳನ್ನು ಪ್ರತಿಬಿಂಬಿಸಿದ್ದಾರೆ ಎಂದು ಉಪರಾಷ್ಟ್ರಪತಿಗಳು ಹೇಳಿದರು.
ಆದರೆ, ಉಪರಾಷ್ಟ್ರಪತಿಗಳ ಈ ಹೇಳಿಕೆಗೆ ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ “ನೀವು ಮಹಾತ್ಮರೊಂದಿಗೆ ಹೋಲಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಸರ್, ಮುಖಸ್ತುತಿಗೆ ಒಂದು ಮಿತಿ ಇದೆ ಎಂದು ನಮಗೆಲ್ಲರಿಗೂ ತಿಳಿದಿದೆ ಮತ್ತು ನೀವು ಆ ಮಿತಿಯನ್ನು ದಾಟಿದ್ದೀರಿ” ಎಂದು ಟ್ಯಾಗೋರ್ ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ. ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಕೂಡ ಧಂಖರ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
मैं आपको एक बात कहना चाहूंगा, पिछली शताब्दी के महापुरुष महात्मा गांधी थे, इस शताब्दी के युगपुरुष नरेंद्र मोदी हैं!
महात्मा गांधी ने सत्य और अहिंसा से हमें अंग्रेजों की गुलामी से छुटकारा दिलाया, भारत के यशस्वी प्रधानमंत्री श्री नरेंद्र मोदी जी ने देश को प्रगति के उस रास्ते पर डाल…pic.twitter.com/mBP7zxIs0C
— Vice-President of India (@VPIndia)November 27, 2023

3 ದೇಶಗಳಲ್ಲಿ ಬೆಳಗ್ಗೆ ಭೂಕಂಪ; ಪಾಕಿಸ್ತಾನ, ಚೀನಾ, ಪಪುವಾ ನ್ಯೂಗಿನಿಯಾದಲ್ಲಿ ಭಯಭೀತರಾದ ಜನರು..ಎಲ್ಲಿ ಎಷ್ಟು ತೀವ್ರತೆಯಿದೆ?





ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen − ten =
Remember me
