ಪಣಜಿ:ವಿಶ್ವದಲ್ಲಿ ಭಯೋತ್ಪಾದನೆ ದೊಡ್ಡ ಸವಾಲಾಗಿದೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸುವುದು ದೊಡ್ಡ ಸವಾಲಾಗಿದೆ ಎಂದು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ.
ಗೋವಾದಲ್ಲಿ ನಡೆಯುತ್ತಿರುವ ಶಾಂಘೈ ಶೃಂಗ ಸಭೆ(SOC)ಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಅವರು ಪಾಕಿಸ್ತಾನದ ವಿರುದ್ಧ ಹರಿಹಾಯ್ದಿದ್ದಾರೆ.
ಇನ್ನು ಸಭೆಯಲ್ಲಿ ಭಾಗವಹಿಸಿದ್ದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್​ ಭುಟ್ಟೋ ವಿರುದ್ಧ ತಮ್ಮ ದಾಳಿ ಮುಂದುವರೆಸಿದ ಜೈಶಂಕರ್​ ಭಯೋತ್ಪಾದಕ ಉದ್ಯಮದ ಪ್ರವರ್ತಕ, ಸಹವರ್ತಿ ಮತ್ತು ವಕ್ತಾರ ಎಂದು ಹರಿಹಾಯ್ದಿದ್ದಾರೆ.
ಭಯೋತ್ಪಾದನೆ ವಿಚಾರದಲ್ಲಿ ಪಾಕಿಸ್ತಾನ ವಿಶ್ವಾಸರ್ಹತೆ ಹಾಗೂ ವಿದೇಶಿ ವಿನಿಮಯ ಕಾಲಕ್ರಮೇಣ ಕ್ಷೀಣಿಸುತ್ತಿದೆ ಎಂದು ಸಹವರ್ತಿ ರಾಷ್ಟ್ರಗಳ ಮುಂದೆ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ.
#WATCH| "I said they (Pakistan) have nothing to do with G20. I will also say that they have nothing to do with Srinagar. There is only one issue to discuss on Kashmir which is when does Pakistan vacate its illegal occupation of Pakistan Occupied Kashmir," says EAM Dr S…pic.twitter.com/Mx7Xg2UQsE
ಇದನ್ನೂ ಓದಿ:ಚುನಾವಣಾ ಅಕ್ರಮ; ಭರ್ಜರಿ​ ಬೇಟೆಯಾಡಿದ ಐಟಿ ಅಧಿಕಾರಿಗಳು
ಇನ್ನು ಕಾಶ್ಮೀರ ಕುರಿತು ಪಾಕಿಸ್ತಾನದ ಜೊತೆ ಮಾತುಕತೆಗೆ ಪ್ರತಿಕ್ರಿಯಿಸಿದ ಜೈಶಂಕರ್​ ಸಂತ್ರಸ್ತರು ದುರ್ಷ್ಕಮಿಗಳ ಜೊತೆ ಕುಳಿತುಕೊಂಡು ಚರ್ಚಿಸುವುದಿಲ್ಲ.
ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿ ಇರುತ್ತದೆ ಎಂದು ಕಣಿವೆ ರಾಜ್ಯದ ವಿಚಾರವಾಗಿ ಪಾಕಿಸ್ತಾನಕ್ಕೆ ಕೌಂಟರ್​ ಕೊಟ್ಟಿದ್ದಾರೆ.
ಕಾಶ್ಮೀರದ ಬಗ್ಗೆ ಪಾಕಿಸ್ತಾನದ ಜೊತೆ ಚರ್ಚಿಸಲು ಒಂದೇ ಒಂದು ವಿಷಯ ಬಾಕಿ ಇದೆ. ಅದೇನೆಂದರೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ತನ್ನ ಅಕ್ರಮ ಪ್ರವೇಶವನ್ನು ಯಾವಾಗ ಖಾಲಿ ಮಾಡುತ್ತದೆ ಅನ್ನೋದೊಂದೇ’ ಎಂದು ಜೈಶಂಕರ್‌ ಗುಡುಗಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × one =
Remember me
