ಅಮರಾವತಿ:ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ವೇಟಿಂಗ್​ ಲಾಂಜ್​ಗೆ ಗುದ್ದಿದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಪಂಡಿತ್​ ಜವಾಹರಲಾಲ್​ ನೆಹರೂ ಬಸ್​ ನಿಲ್ದಾಣದಲ್ಲಿ ನಡೆದಿದೆ.
ಘಟನೆಯ ದೃಶ್ಯ ಬಸ್​ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆಯಲ್ಲಿ ಹಲವರು ಗಂಭಿರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಮುಂದಿನ ಮೂರು ದಿನ ಭಾರೀ ಮಳೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ
ವೈರಲ್​ ಆಗಿರುವ ವಿಡಿಯೋದಲ್ಲಿ ಪಾರ್ಕಿಂಗ್​ನಲ್ಲಿ ಪ್ರಯಾಣಿಕರಿಗಾಗಿ ನಿಂತಿರುವ ಬಸ್​ ಏಕಾಏಕಿ ಚಾಲಕ ನ ನಿಯಂತ್ರಣ ತಪ್ಪಿ ಮುಂದಕ್ಕೆ ಬರಲು ಆರಂಭಿಸುತ್ತದೆ. ನೋಡನೋಡುತ್ತಿದ್ದಂತೆ ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಗುದ್ದಿದ ಬಸ್​ ಬಳಿಕ ಅಲ್ಲಿದ್ದ ಪಿಲ್ಲರ್​ ಬಳಿ ನಿಲ್ಲುತ್ತದೆ. ಇದನ್ನು ಗಮನಿಸಿದ ಬಸ್​ ನಿಲ್ದಾಣದಲ್ಲಿದ್ದ ಸಿಬ್ಬಂದಿ ಹಾಗೂ ಜನರು ಕೂಡಲೇ ಗಾಯಾಳುಗಳ ನೆರವಿಗೆ ಧಾವಿಸುತ್ತಿರುವುದು ಕಂಡು ಬರುತ್ತದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​. ಜಗನ್​ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ. ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ತಿಳಿಸಿದ್ದಾರೆ.
The devastating train accident that occurred in Vijayanagaram district last night has caused me great pain.A running train collided with another stationed train, both of which were running in the same direction.This horrifying accident gives rise to certain obvious questions:…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
