ದೇವನಹಳ್ಳಿ:ಬೆಂಗಳೂರಿನಿಂದ ಕೊಚ್ಚಿಯತ್ತ ಹೊರಟಿದ್ದ ಏರ್​ ಇಂಡಿಯಾ ವಿಮಾನವು ತಾಂತ್ರಿಕ ದೋಷದ ಕಾರಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ರಾತ್ರಿ 11.20ರ ಸುಮಾರಿಗೆ ಈ ಘಟನೆ ನಡೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಏರ್​ ಇಂಡಿಯಾದ ಸಿಬ್ಬಂದಿಯೊಬ್ಬರು, ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ತೆರಳಲು ವಿಮಾನ ಟೇಕ್​​ ಆಫ್ ಆಗಿತ್ತು.  ಆದರೆ ವಿಮಾನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಲಾಗಿದೆ.
Air#Indiaflight from#Bengaluruto#Kochimade an emergency landing at Bengaluru airport due to fire in one of the engines. All 179 passengers and six crew members were evacuated successfully.#Karnatakapic.twitter.com/s6IO1eceyH
ಇದನ್ನೂ ಓದಿ:ಕಲಬುರಗಿ To ಬೆಳಗಾವಿ ವಿಮಾನ ಸಂಚಾರ ಆರಂಭ; ಟಿಕೆಟ್​ ಬೆಲೆ ಕೇಳಿದರೆ ನೀವು ಶಾಕ್​ ಆಗುವುದಂತು ಖಂಡಿತಾ
ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಏರ್​ ಇಂಡಿಯಾದ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.
ಮೇ 17 ರಂದು ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನದ ಬೆಂಕಿ ಕಾಣಿಸಿಕೊಂಡಿತ್ತು. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 175 ಪ್ರಯಾಣಿಕರಿದ್ದ ವಿಮಾನ ಟೇಕ್​ ಆಫ್ ಆಗುವ ವೇಳೆ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಎಚ್ಚೆತ್ತ ಸಿಬ್ಬಂದಿ ಅಲರ್ಟ್ ಮಾಡಿದ್ದು, ಪೈಲೆಟ್ ವಿಮಾನವನ್ನು ದೆಹಲಿ ನಿಲ್ದಾಣದಲ್ಲೇ ಲ್ಯಾಂಡ್​ ಮಾಡಿದ್ದರು. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 10 =
Remember me
