ಪುಣೆ:ಆಘಾತಕಾರಿ ಘಟನೆ ಒಂದರಲ್ಲಿ ಹಾಡಹಗಲೇ ವ್ಯಕ್ತಿಯೋರ್ವ ಯುವತಿಯ ಮೇಲೆ ಮಚ್ಚಿನಿಂದ ಕೊಲೆ ಮಾಡಲು ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯ ಸದಾಶಿವಪೇಟೆಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಆರೋಪಿ ಶಾಂತನು ಲಕ್ಷ್ಮಣ್​ ಜಾಧವ್​ ಎಂದು ಗುರತಿಸಲಾಗಿದ್ದು, ಹಲ್ಲೆಗೊಳಗಾಗಿರುವ ಯುವತಿ ಪ್ರೀತಿ ರಾಮಚಂದ್ರ(20)ಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆರೋಪಿಯ ವಿರುದ್ಧ ನೆಟ್ಟಿಗರು ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
THIS IS HUGE: Thanks for your efforts, Pune residents – Set the example for Delhi Sakshi Case.A Pune man attempted to kiII a female after an attack because of one-sided love, but locals intervened, caught the attacker, and saved the girl, Salute!🔥👏pic.twitter.com/WO0W04cVr1
ಇದನ್ನೂ ಓದಿ:ಈ ಬಾರಿಯ ವಿಶ್ವಕಪ್​ನಲ್ಲಿ​ ಹೆಚ್ಚು ಸ್ಪರ್ಧಾತ್ಮಕತೆ: ರೋಹಿತ್​ ಶರ್ಮಾ
ಹಲ್ಲೆಯ ಕುರಿತು ಪ್ರತಿಕ್ರಿಯಿಸಿರುವ ಯುವತಿ ತಾಯಿ ಆರೋಪಿಯೂ ತುಂಬಾ ದಿನಗಳಿಂದ ನನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಹಲವಾರು ಬಾರಿ ಆತನಿಗೆ ಎಚ್ಚರಿಸಿದ್ದರು ಸಹ ಯಾವುದೇ ಪ್ರಯೋಜನವಾಗಿರಲಿಲ್ಲ. ಇತ್ತೀಚಿಗೆ ಅವನ ತಂದೆಯ ಗಮನಕ್ಕೆ ತರಲಾಗಿತ್ತು. ಇದರಿಂದ ಕುಪಿತಗೊಂಡು ನನ್ನ ಮಗಳ ಮೇಲೆ ದಾಳಿ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪ್ರತ್ಯಕ್ಷದರ್ಶಿಯೊಬ್ಬರು ಯುವಕ ಮೊದಲಿಗೆ ಯುವತಿಯ ಸ್ಕೂಟರ್​ ತಡೆದು ಜಗಳವಾಡಿದ. ಬಳಿಕ ಆಕೆ ಆತನ ಜೊತೆ ಮಾತನಾಡಲು ನಿರಾಕರಿಸಿದಾಗ ಯುವಕ ಏಕಾಏಕಿ ಆಕೆಯ ಮೇಲೆ ಮಚ್ಚಿನಿಂದ ಹಲ್ಲೆಗೆ ಮುಂದಾದ. ಈ ವೇಳೆ ಯುವತಿ ಆತನಿಂದ ತಯಪ್ಪಿಸಿಕೊಂಡಿದ್ದು, ಅಲ್ಲಿದ್ದ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದೇವೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ಧೇವೆ ಎಂದು ತಿಳಿಸಿದ್ದಾರೆ.
ಬಂಧಿತ ಆರೋಪಿ ಹಲವು ದಿನಗಳಿಂದ ಯುವತಿಗೆ ಕಿರುಕುಳ ನೀಡುತ್ತಿದ್ದು, ಈ ಕುರಿತು ಹಲವು ಬಾರಿ ಎಚ್ಚರಿಕೆ ನೀಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಆತನ ವಿರುದ್ಧ ಭಾರತ ದಂಡ ಸಂಹಿತೆ 307ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪುಣೆ ನಗರ ಡಿಸಿಪಿ ಸಂದೀಪ್​ ಸಿಂಗ್​ ಗಿಲ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one − 1 =
Remember me
