ಚೆನ್ನೈ:ಗಣೇಶ ಚತುರ್ಥಿ ಆಚರಣೆಯ ವೇಳೆ ಯುವಕನೊಬ್ಬ ಬುರ್ಖಾ ಧರಿಸಿ ಡಾನ್ಸ್​ ಮಾಡಿರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಆರೋಪಿ ಯುವಕನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ವೆಲ್ಲೂರಿನಲ್ಲಿ ನಡೆದಿದೆ.
ಸೆ. 21 ಗಣೇಶ ಮೂರ್ತಿಯ ಮೆರವಣಿಗೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಬುರ್ಖಾ ಧರಿಸಿ ಮೆರವಣಿಗೆಯ ಬೀದಿಯಲ್ಲಿ ಡಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ಪೊಲೀಸರು ಸಾರ್ವಜನಿಕರಿಂದ ದೂರು ಸ್ವೀಕರಿಸಿದ್ದರು. ದೂರಿನ ಆಧಾರದ ಮೇಲೆ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಕೃತಿ ಶೆಟ್ಟಿ ಬೇಡ ಬೇರೆ ಹೀರೋಯಿನ್ ಇದ್ರೆ ನೋಡಿ: ಸಿನಿಮಾ ತಿರಸ್ಕರಿಸಲು ಕಾರಣ ಕೊಟ್ಟ ವಿಜಯ್​ ಸೇತುಪತಿ
ಬಂಧಿತನನ್ನು ವಿರುಥಂಪಟ್ಟು ಮೂಲದ ಅರುಣ್​ಕುಮಾರ್​ ಎಂದು ಗುರುತಿಸಲಾಗಿದೆ. ಎರಡು ಗುಂಪುಗಳ ನಡುವೆ ದ್ವೇಷ ಉಂಟು ಮಾಡುವ ದುರುದ್ದೇಶದಿಂದಲೇ ಆರೋಪಿ ಅರುಣ್​ಕುಮಾರ್​ ಡಾನ್ಸ್​ ಮಾಡಿರುವ ಆರೋಪ ಕೇಳಿಬಂದಿದೆ.
ಯಾರೇ ಆಗಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಯತ್ನಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಇತರರ ಪತ್ತೆಗೆ ಪೊಲೀಸರು ಮುಂದಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.(ಏಜೆನ್ಸೀಸ್​)
ವಿವಾಹಿತ ಪ್ರೇಯಸಿ ನೋಡಲು ಬಂದು ಸಿಕ್ಕಿಬಿದ್ದ ಪ್ರಿಯಕರ: ಇಬ್ಬರಿಗೂ ಮದುವೆ ಮಾಡಿ ಕಳುಹಿಸಿದ ಗಂಡ!

World’s 2nd Pig Heart Transplantation; ಮಾನವನಿಗೆ ಹಂದಿ ಹೃದಯ ಕಸಿ ಯಶಸ್ವಿ..ಎರಡು ದಿನಗಳಲ್ಲಿ ಚೇತರಿಸಿಕೊಂಡ ರೋಗಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
