ಮುಂಬೈ:ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚಾಗಿ ಬಾಧಿಸುತ್ತಿದ್ದು, ವಿಡ್ ಬಳಿಕ ಹಾರ್ಟ್ ಅಟ್ಯಾಕ್ ಪ್ರಕರಣಗಳು ತೀರಾ ಹೆಚ್ಚಿದ್ದು, ಮಕ್ಕಳು, ಯುವಕರು, ವೃದ್ಧರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲಾ ವಯೋಮಾನದವರು ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ. ಇದೀಗ ಯುವಕನೋರ್ವ ಕ್ರಿಕೆಟ್​ ಆಡುತ್ತಿರುವಾಗಲೇ ಹೃದಯಾಘಾತಕ್ಕೆ ತುತ್ತಾಗಿ ಕೊನೆಯುಸಿರೆಳೆದಿರುವ ಘಟನೆ ಮಹರಾಷ್ಟ್ರದ ರಾಜಧಾನಿ ಮುಂಬೈನ ಮೀರಾ ರೋಡ್​ನಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕ್ರಿಕೆಟ್ ಆಡುತ್ತಿದ್ದ ಸಂದರ್ಭದಲ್ಲಿ ಉತ್ತಮ ಬ್ಯಾಟಿಂಗ್ ಮಾಡುತ್ತಾ ಸಿಕ್ಸರ್ ಬಾರಿಸಿ, ಆ ಖುಷಿಯನ್ನು ಸಂಭ್ರಮಿಸುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಈ ವಿಡಿಯೋವನ್ನು ಎ.ಎಚ್. ಸಿದ್ದಿಕ್ಕಿ ಎಂಬುವವರು ಹಂಚಿಕೊಂಡಿದ್ದಾರೆ.
Mumbai Mira Road: A youth died while playing cricket After playing a quick shot, the young man suddenly falls and dies.#MiraRoad#Sports#Cricket#HeartAttack#CardiacArrestpic.twitter.com/RwLBgWr026
ಇದನ್ನೂ ಓದಿ:ಆರ್​ಸಿಬಿ ಆಟಗಾರ ಆಡಿದಂತಹ ಆ ಮಾತುಗಳೇ ಸ್ಪೋಟಕ ಬ್ಯಾಟಿಂಗ್​ಗೆ ಸ್ಪೂರ್ತಿ; ಎಸ್​ಆರ್​ಎಚ್​ ಆಟಗಾರನ ಹೇಳಿಕೆ ವೈರಲ್
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮೀರಾ ರೋಡ್​ನ ಕಾಶಿಮೀರಾ ಪ್ರದೇಶದ ಟರ್ಫ್​​ ಮೈದಾನದಲ್ಲಿ ಕ್ರಿಕೆಟ್​ ಆಡುತ್ತಿದ್ದಾಗ ಯುವಕನಿಗೆ ಹೃದಯಾಘಾತವಾಗಿದೆ. ಕಂಪನಿ ವತಿಯಿಂದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದ ಯುವಕ ಉತ್ತಮವಾಗಿ ಕ್ರಿಕೆಟ್​ ಆಡುತ್ತಿದ್ದ ಯುವಕ ಸಿಕ್ಸರ್​ ಬಾರಿಸಿ ಸುಸ್ತಾಗಿ ನಿಂತಿದ್ದಾನೆ. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಕೂಡಲೇ ಸಹ ಆಟಗಾರರು ಆತನನ್ನು ಆಸ್ಪತ್ರೆಗೆ ದಾಖಲಿಸಿದರಾದರು ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಕೈ ಸೇರಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
