ನವದೆಹಲಿ:ದಿನ ಕಳೆಧಂತೆ ದೇಶದಲ್ಲಿ ಮಳೆಯ ಜೊತೆಗೆ ತಾಪಮಾನ ಹೆಚ್ಚಳವಾಗುತ್ತಿದ್ದು, ಹವಾಮಾನ ಇಲಾಖೆಯು ಉತ್ತರಭಾರತದ ಹಲವು ರಾಜ್ಯಗಳಿಗೆ ಅಲರ್ಟ್​ ಘೋಷಿಸಿದೆ. ಇತ್ತ ತಾಪಮಾನ ಹೆಚ್ಚಳದಿಂದಾಗಿ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ವಾಹನಗಳಿಗೆ ಫುಲ್​ ಟ್ಯಾಂಕ್​ ಮಾಡಿಸದಂತೆ ಎಚ್ಚರಿಕೆ ನೀಡಲಾಗಿದೆ. ಹೀಗಿರುವಾಗಲೇ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕಾರೊಂದು ವಾಟರ್​ ಬಾಟಲ್​ನಿಂದ ಸುಟ್ಟು ಕರಕಲಾಗಿರುವ ಘಟನೆ ಬೆಳಕಿಗೆ ಬಂದಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಕಾರು ಹೊತ್ತಿ ಉರಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಆದರೆ, ಕಾರು ವಾಟರ್​ ಬಾಟಲ್​ನಿಂದ ಸುಟ್ಟು ಕರಕಲಾಯ್ತು ಎಂಬ ಸುದ್ದಿ ಕೇಳಿ ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅಧಿಕಾರಿಗಳು ನೀಡಿರುವ ವಿವರಣೆ ಹೀಗಿದೆ.
For car owners.JANHIT ME JAARI.pic.twitter.com/NASjatD4vE
ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಪ್ರಕರಣ; ನಟ ದರ್ಶನ್​ ಸಿಕ್ಕಿಬಿದ್ದಿದ್ದು ಮಾತ್ರ ರೋಚಕ
ಈ ಕುರಿತು ಮಾತನಾಡಿರುವ ಅಧಿಕಾರಿಯೊಬ್ಬರು, ಕಾರಿನ ಸೀಟ್​ ಮೇಲೆ ಇಡಲಾಗಿದ್ದ ಖಾಲಿ ನೀರಿನ ಬಾಟಲಿಗೆ ಸೂರ್ಯನ ಕಿರಣ ತಾಗಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದ್ದು, ಸುಟ್ಟು ಕರಕಲಾಗಿದೆ. ಘಟನೆ ನಡೆದಾಗ ಕಾರಿನಲ್ಲಿ ಯಾರು ಇರಲಿಲ್ಲ ಎಂದು ತಿಳಿದು ಬಂದಿದೆ. ವಿಚಾರ ತಿಳಿದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಅಪ್ಲೋಡ್ ಆದ ಕೆಲವೇ ಕ್ಷಣಗಳಲ್ಲಿ ಐದು ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಗೆ ಒಳಪಟ್ಟಿದೆ. ಈ ವಿಡಿಯೋ ಅನೇಕರಲ್ಲಿ ಜಾಗೃತಿ ಮೂಡಿಸುತ್ತಿದ್ದು, ಇನ್ನು ಮುಂದೆ ಕಾರಿನಲ್ಲಿ ವಾಟರ್​ ಬಾಟಲ್​ ಸೇರಿದಂತೆ ಕೆಲವು ವಸ್ತುಗಳನ್ನು ಇಡದಂತೆ ಎಚ್ಚರಿಕೆ ನೀಡಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + four =
Remember me
