ಚೆನ್ನೈ:ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ಭಾರತದ ಧ್ವಜ ಹಿಡಿದು ಬಂದಿದ್ದ ಕ್ರೀಡಾಭಿಮಾನಿಗಳನ್ನು ಪೊಲೀಸ್​ ಅಧಿಕಾರಿಯೊಬ್ಬರು ತಡೆದಿರುವ ಘಟನೆ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿಯ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಅಧಿಕಾರಿಯು ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿರುವುದು ಸರಿಯಲ್ಲ ಎಂದು ಹಲವರು ಕಿಡಿಕಾರಿದ್ದಾರೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಭಾರತದ ಧ್ವಜವನ್ನು ಹಿಡಿದು ಪಂದ್ಯವನ್ನು ವೀಕ್ಷಿಸಲು ಬಂದ ಕ್ರೀಡಾಭಿಮಾನಿಗಳನ್ನು ತಡೆಯುವ ಪೊಲೀಸ್​ ಅಧಿಕಾರಿ ಒಳಗೆ ಹೋಗದಂತೆ ತಾಕೀತು ಮಾಡುತ್ತಾರೆ. ಯಾಕೆ ಎಂದು ಪ್ರಶ್ನಿಸಿದಾಗ ಆತ ಭಾರತದ ಧ್ವಜಗಳನ್ನು ಒಳಗೆ ತೆಗೆದು ಹೋಗಲು ಅವಕಾಶವಿಲ್ಲ ಎಂದು ಹೇಳಿ ಅವರ ಕೈಯಲ್ಲಿದ್ದ ಬಾವುಟಗಳನ್ನು ತೆಗೆದು ಕಸದ ಬುಟ್ಟಿಗೆ ಎಸೆಯುತ್ತಾರೆ.
@chennaipolice_take action on these policemen !!! This is not good.
ಇದನ್ನೂ ಓದಿ:ರಾಜಸ್ಥಾನ ಚುನಾವಣೆ; ಜನರ ವಿಶ್ವಾಸವನ್ನು ಗೆಲ್ಲಲಾಗದ ಬಿಜೆಪಿ EDಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಅಶೋಕ್​ ಗೆಹ್ಲೋಟ್
ಇದನ್ನು ನೋಡಿದ ಕೆಲವರು ಅಧಿಕಾರಿಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೂಡಲೇ ಎಚ್ಚೆತ್ತ ಅಧಿಕಾರಿಯು ಕಸದ ಬುಟ್ಟಿಗೆ ಹಾಕಿದ್ದ ಬಾವುಟಗಳನ್ನು ಹೊರತೆಗೆದಿದ್ದಾರೆ. ಇದರ ವಿಡಿಯೋ ಎಲ್ಲೆಡೆ ವೈರಲ್​ ಆಗಿದ್ದು, ಆಡಳಿತರೂಢ ಡಿಎಂಕೆ ಹಾಗೂ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದ್ದು, ವಿಸ್ತೃತ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ. ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಬಾವುಟಗಳನ್ನು ತೆಗೆದುಕೊಂಡು ಹೋಗದಂತೆ ನಿರ್ಭಂಧಿಸಿಲ್ಲ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
The incident mentioned has been brought to notice. Enquiry has been initiated against the SI concerned deployed for bandobust duty at MAC Stadium . He was recalled to Control Room. Appropriate action as per law will be taken based on the findings.Apart from this solitary…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
