ಮುಂಬೈ:ಯುವಕನೊಬ್ಬ ಇಬ್ಬರು ಯುವತಿಯರನ್ನು ಬೈಕಿನಲ್ಲಿ ಕೂರಿಸಿಕೊಂಡು ವೀಲ್ಹಿಂಗ್​ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ತಪ್ಪಿತಸ್ಥನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ಬಂಧಿತ ಯುವಕ 24 ವರ್ಷ ಪ್ರಾಯದವನಾಗಿದ್ದು ಇಬ್ಬರು ಯುವತಿಯರನ್ನು ಬೈಕಿನಲ್ಲಿ ಕೂರಿಸಿಕೊಂಡು ವೀಲ್ಹಿಂಗ್​ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್​​(BKC) ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಆರೋಪಿ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು.
A case has been registered with BKC Police Station. Investigation into identifying the accused is underway.If anyone has any information about persons in this video, you can DM us directly.https://t.co/CWGoqzSuaP
ಇದನ್ನೂ ಓದಿ:VIDEO | ಇಬ್ಬರು ಯುವತಿಯರೊಂದಿಗೆ ಬೈಕ್​ನಲ್ಲಿ ವೀಲ್ಹಿಂಗ್; ತಪ್ಪಿತಸ್ಥರ ಪತ್ತೆಗೆ ಬಲೆ ಬೀಸಿದ ಪೊಲೀಸರು!
ಈ ಮೊದಲು ಆರೋಪಿ ವಿರುದ್ಧ ಆ್ಯಂಟೋಪ್​ ಹಿಲ್​​, ವಡಾಲಾ ಟಿಟಿ ಪೊಲೀಸ್​ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಆರೋಪಿ ಯುವಕನ ವಿರುದ್ಧ ಭಾರತ ದಂಡ ಸಂಹಿತೆ(IPC) 308 ಮತ್ತು ಮೋಟಾರು ವಾಹನ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ವೈಡಲ್​ ಆಗಿದ್ದ ವಿಡಿಯೋದಲ್ಲಿ ಯುವಕನೊಬ್ಬ ಇಬ್ಬರು ಯುವತಿಯರನ್ನು ತನ್ನ ಗಾಡಿಯ ಪೆಟ್ರೋಲ್​ ಟ್ಯಾಂಕ್​ ಹಾಗೂ ಹಿಂಬದಿ ಸೀಟಿನಲ್ಲಿ ಕೂರಿಸಿಕೊಂಡಿರುವುದು ಕಂಡು ಬರುತ್ತದೆ. ಬಳಿಕ ಅಪಾಯಕಾರಿಯಾಗಿ ವೀಲ್ಹಿಂಗ್​ ಮಾಡುತ್ತಾ ಸಾಗುತ್ತಿರುವುದು ವಿಡಿಯೋದಲ್ಲಿ ಕಂಡು ಬರುತ್ತದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
