ಹೈದರಾಬಾದ್​:ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಯೊಂದು ದಾಳಿ ಮಾಡಿದ್ದು ಅದೃಷ್ಟವಶಾತ್​ ಬಾಲಕ ಪ್ರಾಣಪಾಯದಿಂದ ಪಾರಾಗಿರುವ ಘಟನೆ ತೆಲಂಗಾಣದ ಮೇಡ್​ಚಲ್​ ಜಿಲ್ಲೆಯ ಸೂರಾರಂ ವ್ಯಾಪ್ತಿಯ ಶ್ರೀರಾಮ್ನಗರದಲ್ಲಿ ನಡೆದಿದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಬಾಲಕ ತನ್ನ ಸ್ನೇಹಿತನೊಂದಿಗೆ ಮನೆ ಮುಂಭಾಗ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಯೊಂದು ದಿಢೀರ್​ ಎಂದು ಅವನ ಮೇಲೆ ದಾಳಿ ಮಾಡುತ್ತದೆ.
ಈ ವೇಳೆ ದೃತಿಗೆಡದ ಬಾಲಕ ನಾಯಿಯ ಜೊತೆ ಹೋರಾಡಿ ಅದನ್ನು ಹಿಮ್ಮೆಟ್ಟಿಸಿ ಒಡಿಸುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಬಾಲಕನ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Another dog attack in HyderabadLocation:Sri ram nagar colony,Suraram.Will government wake up and get some shamesolve the Telangana issues before talking about Delhi or Odisha.Peak shamelessness.pic.twitter.com/WncockAiY6— Gayathri Bandari (@GayathriBDevi)June 4, 2023

Another dog attack in HyderabadLocation:Sri ram nagar colony,Suraram.Will government wake up and get some shamesolve the Telangana issues before talking about Delhi or Odisha.Peak shamelessness.pic.twitter.com/WncockAiY6
ಇದನ್ನೂ ಓದಿ:ಯಾರನ್ನು ತೃಪ್ತಿಪಡಿಸಲು ಸಚಿವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ?: ಆರಗ ಜ್ಞಾನೇಂದ್ರ
ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ನಿವಾಸಿ ಒಬ್ಬರು ಹಲವು ದಿನಗಳಿಂದ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ಧಾರೆ.
ಬೀದಿ ನಾಯಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕನ್ನು ಆತನ ಪೋಷಕರು ಹೆಚ್ಚಿನ ಚಿಕತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
