ಪುಣೆ:ಜನವರಿ 22ರಂದು ಸಂಪನ್ನಗೊಂಡ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯದ ಕುರಿತು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದರು. ಏತನ್ಮಧ್ಯೆ ಪುಣೆ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆ ವಿದ್ಯಾರ್ಥಿ ಗುಂಪಿನ ನಡುವೆ ಹೊಡೆದಾಟಕ್ಕೆ ಕಾರಣವಾಗಿದೆ.
ಲಲಿತ ಕಲಾ ಕೇಂದ್ರದ ವಿದ್ಯಾರ್ಥಿಗಳು ಪ್ರದರ್ಶಿಸಿದ ರಾಮಲೀಲಾ ನಾಟಕದಲ್ಲಿ ಈ ರೀತಿಯ ಆಕ್ಷೇಪಾರ್ಹ ದೃಶ್ಯಗಳು ಕಂಡುಬಂದಿದ್ದು, ಇದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್​ ಆಕ್ಷೇಪ ವ್ಯಕ್ತಪಡಿಸಿ ದೂರು ದಾಖಲಿಸಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಸೀತಾ ಮಾತೆಯ ವೇಷ ಧರಿಸಿರುವ ನಟಿ ಧೂಮಪಾನ ಮಾಡುತ್ತಿರುವುದನ್ನು ನೋಡಬಹುದಾಗಿದೆ. ನಂತರ ಲಕ್ಷ್ಮಣ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪದಡಿ ದೂರು ದಾಖಲಾಗಿದೆ.
ಇದನ್ನೂ ಓದಿ:ಪೂನಂ ಪಾಂಡೆ ಸಾವಿನ ಸುದ್ದಿ ನಿಜವಾಗಿರುವುದಕ್ಕೆ ಸಾಧ್ಯವಿಲ್ಲ: ಮಾಜಿ ಪತಿ ಬಿಚ್ಚಿಟ್ಟ ಸ್ಫೋಟಕ ಮಾಹಿತಿ
ಈ ಕುರಿತು ಪ್ರತಿಕ್ರಿಯಿಸಿರುವ ಪುಣೆ ವಿಶ್ವವಿದ್ಯಾಲಯದ ಎಬಿವಿಪಿ ಅಧ್ಯಕ್ಷ ಶಿವ ಬರೋಲೆ, ಲಲಿತಾ ಕಲಾ ಕೇಂದ್ರದ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕವು ಆಕ್ಷೇಪಕಾರಿಯಾಗಿದ್ದು, ಧಾರ್ಮಿಕ ಭಾವನೆಗಳಿಗ್ಗೆ ಧಕ್ಕೆ ಉಂಟು ಮಾಡಿದೆ. ಈ ಸಂಬಂಧ ದೂರು ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಾಟಕ ಪ್ರದರ್ಶನ ಸಂಬಂಧ ಪೊಲೀಸರು ಪ್ರವೀಣ್ ಭೋಲೆ, ಭವೇಶ್ ಪಾಟೀಲ್, ಜಯ್ ಪೆಡ್ನೇಕರ್, ಪ್ರಥಮೇಶ್ ಸಾವಂತ್, ಹೃಷಿಕೇಶ್ ದಾಲ್ವಿ ಮತ್ತು ಯಶ್ ಚಿಖ್ಲೆ ಸೇರಿದಂತೆ ಆರು ವಿದ್ಯಾರ್ಥಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (IPC Section) 295A, 294, 143, 147, 149, 323 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪುಣೆ ವಿಶ್ವವಿದ್ಯಾಲಯದ ಎಬಿವಿಪಿ ಅಧ್ಯಕ್ಷ ಶಿವ ಬರೋಲೆ ತಿಳಿಸಿದ್ದಾರೆ.
शेवटी बळी विद्यार्थी आणि शिक्षणाचा..सावित्रीबाई फुले#पुणेविद्यापीठातील संहिता ते प्रयोग या अंतर्गत झालेल्या 'जब वी मेट ' या सादरीकरणात रामलीलेत काम करणाऱ्या कलाकाराचे आयुष्य दाखविले आहे. त्यात अर्वाच्च शिव्या आणि आक्षेपार्ह संवाद आहे. सार्वजनिक जीवनात आपण हे मान्य करू?#sppupic.twitter.com/fcetZjXVpK
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + eleven =
Remember me
