ಹೈದರಾಬಾದ್​​:ಕಳೆದ ಕೆಲವು ದಿನಗಳಿಂದ ತೆಲಂಗಾಣ ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದೆ. ಇದರಿಂದ ಹೈದರಾಬಾದ್​ ಸೇರಿದಂತೆ ತೆಲಂಗಾಣದ ಅನೇಕ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕೆರೆ, ಕಟ್ಟೆಗಳು ತುಂಬಿ ತುಳುಕುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತುವೆ. ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿದ್ದು, ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಂಡು, ಸಂಪರ್ಕ ಕಡಿತಗೊಂಡಿದೆ.
ಹವಾಮಾನ ಇಲಾಖೆ ಪ್ರಕಾರ ಈ ವರ್ಷ ಹಿಂದೆಂದೂ ಕಾಣದಂತಹ ಭಾರಿ ಮಳೆಯಾಗುತ್ತಿದೆ. ಅಲ್ಲದೆ, ಇನ್ನೂ ಕೆಲವು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ತಗ್ಗು ಪ್ರದೇಶಗಳಲ್ಲಿ ಎಲ್ಲಿ ನೋಡಿದರೂ ಪ್ರವಾಹದ ನೀರು ಕಾಣುತ್ತಿದೆ. ಹೈದರಾಬಾದಿನಲ್ಲಿ ಭಾರಿ ಮಳೆಯಾಗುತ್ತಿರುವುದರ ನಡುವೆ ವಿಚಿತ್ರ ಘಟನೆಯೊಂದು ನಡೆದಿದೆ.
ಸದ್ಯ ಹೈದರಾಬಾದ್​ನಲ್ಲಿ ನಿರಂತರ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವೆಡೆ ಸಂಪೂರ್ಣ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ನಾನಾ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಯದಲ್ಲಿ ಭೂಮಿಯು ತೇವವಾಗಿರುತ್ತದೆ. ಆದರೆ, ಜುಬಿಲಿ ಹಿಲ್ಸ್ ಕೆಬಿಆರ್ ಪಾರ್ಕ್​ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ.
ರಸ್ತೆಯಲ್ಲಿ ಸಣ್ಣದಾಗಿ ಕಾಣಿಸಿಕೊಂಡ ಹೊಗೆ ಕ್ರಮೇಣ ದೊಡ್ಡದಾಯಿತು. ಭೂಮಿಯಿಂದ ಹೊಗೆ ಬರುತ್ತಿರುವುದನ್ನು ಕಂಡು, ವಾಹನ ಸವಾರರು ಹಾಗೂ ಜನರು ಗಾಬರಿಗೊಂಡಿದ್ದಾರೆ. ಭಾರಿ ಮಳೆಯಾಗುತ್ತಿರುವ ಸಮಯದಲ್ಲೂ ನೆಲದಿಂದ ಈ ರೀತಿ ಹೊಗೆ ಬರುತ್ತಿರುವುದು ಹೇಗೆ ಎಂದು ಗೊಂದಲ ಮೂಡಿಸಿದೆ.
ಈ ವಿಚಿತ್ರ ಘಟನೆಯನ್ನು ವೀಕ್ಷಿಸಲು ಜನರು ಮುಗಿಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ವಿದ್ಯುತ್ ಇಲಾಖೆ ಆ ಪ್ರದೇಶದಲ್ಲಿ 11 ಕೆವಿ ಕೇಬಲ್ ಅನ್ನು ನೆಲದಡಿಯಲ್ಲಿ ಅಳವಡಿಸಿದ್ದಾರೆ. ಪ್ರಸ್ತುತ ಮಳೆಯಾಗುತ್ತಿರುವುದರಿಂದ ಒಳಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಹೊಗೆ ಹೊರಬಂದಿರುವ ಶಂಕೆ ವ್ಯಕ್ತವಾಗಿದೆ. ಇಲ್ಲವಾದಲ್ಲಿ ಇನ್ನಾವುದಾದರೂ ಕಾರಣಗಳಿವೆಯೇ ಎಂದು ತಿಳಿಯಲು ಅಧಿಕಾರಿಗಳು ಫೀಲ್ಡಿಗಿಳಿದಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಜನರನ್ನು ಚದುರಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.(ಏಜೆನ್ಸೀಸ್​)
ಮಾಂಸಕ್ಕಾಗಿ ಕೊಲ್ಲಬೇಡಿ ನಾವು ಸಹಾಯ ಮಾಡ್ತೀವಿ: ನಮೀಬಿಯಾ ಪ್ರಾಣಿಗಳ ರಕ್ಷಣೆಗೆ ಮಿಡಿದ ಅನಂತ್​ ಅಂಬಾನಿಯ ವಂತಾರಾ

ಡಾ.ಬ್ರೋ ಗೋ ಪ್ರವಾಸ ಕಂಪನಿಯಲ್ಲಿದೆ ಉದ್ಯೋಗವಕಾಶ: ಯಾವ ಕೆಲಸ? ಅರ್ಹತೆಗಳೇನು? ಸಂಬಳ ಎಷ್ಟು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:11 − three =
Remember me
