ಗೋರಖಪುರ:ಭಾರತೀಯ ಸಂಸ್ಕೃತಿಯಲ್ಲಿ ಮದುವೆಗಳನ್ನು ಯಾವಾಗಲೂ ಅತ್ಯಂತ ಪವಿತ್ರ ಸಂಬಂಧವೆಂದು ಪರಿಗಣಿಸಲಾಗಿದೆ. ಸಂತೋಷದ ವೈವಾಹಿಕ ಜೀವನವನ್ನು ರೂಪಿಸುವ ಯಾವುದೇ ವಿಶಾಲವಾದ ವ್ಯಾಖ್ಯಾನಗಳಿಲ್ಲ. ಈ ಪರಿಸ್ಥಿತಿಯಲ್ಲಿ ವಿವಿಧ ಗೊಂದಲಗಳು ಮತ್ತು ಬಗೆಹರಿಯದ ಸಮಸ್ಯೆಗಳಿಂದ ವಿವಾಹೇತರ ಸಂಬಂಧಗಳು ಹೆಚ್ಚಾಗುತ್ತಿವೆ.
ಇದನ್ನೂ ಓದಿ:Viral Video: ಹೆತ್ತೆ ತಾಯಿಯ ಮೇಲೆ ಅಮಾನುಷ ಹಲ್ಲೆ ನಡೆಸಿದ ಮಗ: ಹೆಡೆಮುರಿ ಕಟ್ಟಿದ ಪೊಲೀಸರು!
ಹೌದು..ಉತ್ತರ ಪ್ರದೇಶದ ಗೋರಖಪುರದಲ್ಲಿ ನಡೆದಿರುವ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಕಳೆದ 7 ವರ್ಷಗಳಿಂದ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಪತ್ನಿಯ ನಡೆಯನ್ನು ಪತ್ತೆ ಹಚ್ಚಿದ್ದಾನೆ. ಪತಿಗೆ ತನ್ನ ಅಕ್ರಮ ಸಂಬಂಧ ಮಾಹಿತಿ ತಿಳಿಯುತ್ತಿದ್ದಂತೆ ಪತ್ನಿ ರಂಪಾಟ ಮಾಡಿದ್ದಾಳೆ.
मोहब्बत का ऐसा सिला…', 3 बच्चों की मां को चढ़ा 'इश्क का बुखार',प्रेमी को साथ रखने की बात पर पति से नाराज, खंभे पर चढ़ करने लगी तांडव !!#यूपीके#गोरखपुरसे एक हैरान कर देने वाला मामला सामने आया है। यहां तीन बच्चो की माँ को प्यार का खुमार चढ़ा है और प्यार का खुमार भी इस कदर…pic.twitter.com/J6XQ4FMxRh
— MANOJ SHARMA LUCKNOW UP🇮🇳🇮🇳🇮🇳 (@ManojSh28986262)April 3, 2024

ಪೈಪರಾಚ್ ಗ್ರಾಮದ ರಾಮ್ ಗೋವಿಂದ್ ಪತ್ನಿ 34 ವರ್ಷದ ಮಹಿಳೆ ಮೂವರು ಮಕ್ಕಳ ತಾಯಿ. ಕಳೆದ 7 ವರ್ಷಗಳಿಂದ ಈಕೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ. ಇತ್ತೀಚೆಗೆ ಪತ್ನಿಯ ನಡವಳಿಕೆಯಲ್ಲಿ ಅನುಮಾನ ತಂದಿತ್ತು. ಹೀಗಾಗಿ ಪತ್ನಿಯನ್ನು ಪ್ರಶ್ನಿಸಿದ್ದಾನೆ. ಆದರೆ ತಾನು ಪತಿವೃತೆ ಅನ್ನೋದನ್ನು ಎಲ್ಲಿಬೇಕಾದರು ಸಾಬೀತುಪಡಿಸುತ್ತೇನೆ ಎಂದು ಹೇಳಿ ಗದರಿಸಿದ್ದಳು. ಹೀಗಾಗಿ ಪತಿ ರಾಮ್ ಗೋವಿಂದ್ ಸುಮ್ಮನಾಗಿದ್ದ. ಇತ್ತೀಚೆಗೆ ಪತ್ನಿಯ ಅನೈತಿಕ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಪತಿ ಪತ್ತೆ ಹಚ್ಚಿದ್ದಾನೆ.
ನಂತರ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಬಳಿಕ ಮನೆಯಿಂದ ಹೊರಬಿದ್ದ ಪತ್ನಿ ಪಕ್ಕದಲ್ಲಿದ್ದ ಹೈಟೆನ್ಶನ್ ವೈಯರ್‌ನ ವಿದ್ಯುತ್ ಕಂಬ ಹತ್ತಿ ಹೈಡ್ರಾಮ ನಡೆಸಿದ್ದಾಳೆ. ಅನೈತಿಕ ಸಂಬಂಧವನ್ನು ವಿರೋಧಿಸಿದ್ದರಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ.
ಪಕ್ಕದ ಗ್ರಾಮದ ಯುವಕನೊಂದಿಗಿನ ಅನೈತಿಕ ಸಂಬಂಧವನ್ನು ಒಪ್ಪದ ಹಿನ್ನೆಲೆಯಲ್ಲಿ ಮಹಿಳೆ ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಒಂದು ತಿಂಗಳ ಹಿಂದೆ ಕಟ್ಟಡವೊಂದರ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ್ದಳು ಎಂದು ವರದಿಯಾಗಿದೆ.
ಈ ಸಂಬಂಧ ಪೊಲೀಸರು, ವಿದ್ಯುತ್ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ಕೆಳಗಿಳಿಸಲು ಹರಸಾಹಸ ಮಾಡಿದ್ದಾರೆ. ಈ ಘಟನೆ ವಿಡಿಯೋ ವೈರಲ್ ಆಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಎದುರಿಸುತ್ತಿದ್ದಾರೆ.
ರನ್ ಮಷಿನ್ ಕೊಹ್ಲಿಯನ್ನು ಔಟ್ ಮಾಡುವುದೇ ನನ್ನ ಗುರಿ: ಸಿದ್ದಾರ್ಥ್‌ ಹೀಗ್ಯಾಕೆ ಹೇಳಿದ್ರು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 16 =
Remember me
