ನವದೆಹಲಿ:ಭಾರತದಲ್ಲಿನ ಹಲವು ಬ್ಯಾಂಕ್​ಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿ ಲಂಡನ್​ಗೆ ಪರಾರಿಯಾಗಿರುವ ವಾಣಿಜ್ಯೋದ್ಯಮಿ ವಿಜಯ್​ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವಲ್ಲಿ ವಿಳಂಬವಾಗಲಿದೆ. ಅವರ ಹಸ್ತಾಂತರ ಪ್ರಕ್ರಿಯೆಯಲ್ಲಿ ಕಾನೂನು ತೊಡಕೊಂದು ಕಾಣಿಸಿಕೊಂಡಿರುವುದು ಇದಕ್ಕೆ ಕಾರಣ ಎಂದು ಬ್ರಿಟನ್​ ಸರ್ಕಾರ ಸ್ಪಷ್ಟಪಡಿಸಿದೆ.
ಆ ಕಾನೂನು ತೊಡಕು ತುಂಬಾ ಗೌಪ್ಯವಾದದ್ದು. ಉಭಯ ರಾಷ್ಟ್ರಗಳೊಂದಿಗಿನ ಅಪರಾಧಿಗಳ ವಿನಿಮಯ ಒಪ್ಪಂದದನ್ವಯ ಈ ಕಾನೂನು ತೊಡಕು ನಿವಾರಣೆಯಾಗದ ಹೊರತು ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಸಾಧ್ಯವಿಲ್ಲ. ಆ ತೊಡಕು ನಿವಾರಣೆಗೊಳಿಸಿಕೊಳ್ಳುವಲ್ಲಿ ಹಲವು ತಿಂಗಳು, ವರ್ಷಗಳೇ ಬೇಕಾಗಬಹುದು. ಆದರೂ ಅದನ್ನು ತ್ವರಿತವಾಗಿ ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬ್ರಿಟನ್​ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ಭಾರತದ ಬ್ಯಾಂಕ್​ಗಳಿಗೆ ವಂಚಿಸಿ ಲಂಡನ್​ಗೆ ಪರಾರಿಯಾಗಿದ್ದ ವಿಜಯ್​ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಲಂಡನ್​ ಹೈಕೋರ್ಟ್​ ಆದೇಶ ಹೊರಡಿಸಿತ್ತು. ಈ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸುವ ಮಲ್ಯ ಅವರ ಪ್ರಯತ್ನ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬ್ರಿಟನ್​ ಸರ್ಕಾರ ಭಾರತಕ್ಕೆ ಹಸ್ತಾಂತರಿಸುತ್ತದೆ ಎಂದೇ ಹೇಳಲಾಗುತ್ತಿತ್ತು.
2019ರ ನವೆಂಬರ್​ನಲ್ಲೇ ಭಾರತ ಪ್ರವೇಶಿಸಿದ್ದ ಕರೊನಾ ವೈರಾಣು

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × five =
Remember me
