ಅಮರಾವತಿ:ಕೌಶಲ್ಯಾಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ನವೆಂಬರ್ 1ರವರೆಗೆ ವಿಸ್ತರಿಸಿ ಆದೇಶಿಸಿದೆ.
ಗುರುವಾರ (ಅಕ್ಟೋಬರ್ 19)ಕ್ಕೆ ಅವರ ನ್ಯಾಯಾಂಗ ಬಂಧನ ಅವಧಿ ಕೊನೆಗೊಂಡ ಬಳಿಕ ಅವರ ಬಂಧನದ ಅವಧಿಯನ್ನು ಸ್ಥಳೀಯ ಎಸಿಬಿ ನ್ಯಾಯಾಲಯವು ನಾಲ್ಕನೇ ಬಾರಿಗೆ ವಿಸ್ತರಿಸಿದೆ.
Andhra Pradesh | Vijayawada's ACB court extends Former CM N Chandrababu Naidu's remand till November 1 in connection with the alleged skill development scam.
ಇದನ್ನೂ ಓದಿ:ಕಾಂಗ್ರೆಸ್​ ವತಿಯಿಂದ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಸಾಧ್ಯತೆ: ಶಶಿ ತರೂರ್
ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದ ಕಾರಣ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ವಿಜಯವಾಡ ಎಸಿಬಿ ನ್ಯಾಯಾಲಯವು ನ್ಯಾಯಾಂಗ ಬಂಧನದ ಅವಧಿಯನ್ನು ನವೆಂಬರ್​ 1ರವರೆಗೆ ವಿಸ್ತರಿಸಿ ಆದೇಶಿಸಿದೆ.
ಕೌಶಲ್ಯಾಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶ ಸಿಐಡಿ ಸೆಪ್ಟೆಂಬರ್​ 9ರಂದು ವಶಕ್ಕೆ ಪಡೆದಿತ್ತು. ಚಂದ್ರಬಾಬು ನಾಯ್ಡು ಅವರನ್ನು ವಿಜಯವಾಡದಲ್ಲಿರುವ ರಾಜಮಹೇಂದ್ರವರಂ ಕಾರಾಗೃಹದಲ್ಲಿ ಇರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
