ನವದೆಹಲಿ:ಮೂರು ದಶಕಗಳಿಂದ ನೂರಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿ ಹಲವಾರು ಮಂದಿಯ ಜೀವ ತೆಗೆದು ಅಟ್ಟಹಾಸ ಮೆರೆದಿದ್ದ ಕುಖ್ಯಾತ ರೌಡಿ ವಿಕಾಸ್‌ ದುಬೆ ಇಂದು ಬೆಳಗ್ಗೆ ಎನ್‌ಕೌಂಟರ್‌ನಲ್ಲಿ ಬಲಿಯಾಗಿದ್ದಾನೆ.
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋದ ಸಮಯದಲ್ಲಿ ಎನ್‌ಕೌಂಟರ್‌ ಆಗಿರುವುದಾಗಿ ಪೊಲೀಸರು ಹೇಳುತ್ತಿದ್ದು, ಇದನ್ನು ಅನೇಕ ಮಂದಿ ಅಲ್ಲಗಳೆಯುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ, ಎನ್‌ಕೌಂಟರ್‌ ಸತ್ಯಾಸತ್ಯತೆಯ ಕುರಿತು ತನಿಖೆ ನಡೆಸುವಂತೆ ಇದೀಗ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಘನಶ್ಯಾಮ್‌ ಉಪಾಧ್ಯ ಎನ್ನುವವರು ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಕಾನ್ಪುರ ಪೊಲೀಸರ​ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್​ ವಿಕಾಸ್​ ದುಬೆ ಎನ್​ಕೌಂಟರ್​
ಮನುಷ್ಯನನ್ನು ಈ ರೀತಿ ಕೊಲ್ಲುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದ ಈ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ಅಲ್ಲದೇ ಈ ತನಿಖೆ ಸುಪ್ರೀಂಕೋರ್ಟ್‌ನ ನಿಗಾದಲ್ಲಿ ಸಿಬಿಐನಿಂದ ನಡೆಸಬೇಕು. ಈ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿದ್ದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಕಾಗೆ ಹಿಕ್ಕೆ ಹಾಕಿತೆಂದು ಎರ್ರಾಬಿರ್ರಿ ಗುಂಡು ಹಾರಿಸಿದ್ದ ದುಬೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen + thirteen =
Remember me
