ಭೋಪಾಲ್​:ಕರೊನಾ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ. ಹಾಗಿದ್ದರೂ ಅಂಗಡಿ ತೆರೆದಿದ್ದ ಗ್ರಾಮಕ್ಕೆ ಭೇಟಿ ಕೊಟ್ಟ ಪೊಲೀಸ್​ ಅಧಿಕಾರಿಗಳು ಅಂಗಡಿ ಮುಚ್ಚಿಸಲು ಪ್ರಯತ್ನಿಸಿದ್ದಕ್ಕೆ ಗ್ರಾಮಸ್ಥರೆಲ್ಲ ಸೇರಿ ಅಧಿಕಾರಿಗಳಿಗೇ ಥಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿದೆ. ಆದರೆ ಅದನ್ನು ಲೆಕ್ಕಿಸದ ಗ್ರಾಮಸ್ಥರು ಮೇ 28ರಂದು ಮಾಮೂಲಿನಂತೆ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಲಾಕ್​ಡೌನ್​ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂದು ಪರಿಶೀಲಿಸಲು ಬಂದ ಪೊಲೀಸರು ಗ್ರಾಮಸ್ಥರ ನಡವಳಿಕೆಯಿಂದ ಬೇಸರಗೊಂಡಿದ್ದಾರೆ. ಅಂಗಡಿಗಳನ್ನು ಕೂಡಲೇ ಮುಚ್ಚುವಂತೆ ತಿಳಿಸಿದ್ದಾರೆ.
ಅಂಗಡಿ ಮುಚ್ಚಿಸುವ ವೇಳೆ ಪೊಲೀಸ್​ ಅಧಿಕಾರಿ ಅಲ್ಲಿನ ಗ್ರಾಮಸ್ಥರೊಬ್ಬರ ತಲೆಗೆ ಹೊಡೆದರು ಎನ್ನಲಾಗಿದೆ. ಅದೇ ಕಾರಣಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. (ಏಜೆನ್ಸೀಸ್)
ಗಂಡನ ಕಳ್ಳಾಟವನ್ನು ಪೊಲೀಸರೆದುರೇ ಬಯಲು ಮಾಡಿದ ಹೆಂಡತಿ! ಮುಂದಾಗಿದ್ದು ಹೈ ಡ್ರಾಮ..

ಒಂದೇ ದಿನದಲ್ಲಿ ಮೂವರು ಯುವತಿಯರ ದಿಢೀರ್​ ನಾಪತ್ತೆ! ಒಂದೊಂದು ಪ್ರಕರಣವೂ ವಿಭಿನ್ನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
