ತಮಿಳುನಾಡು: ದಲಿತ ವ್ಯಕ್ತಿಯೊಬ್ಬ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕೆ ಘರ್ಷಣೆ ಉಂಟಾದ ಬೆನ್ನಲ್ಲೇ ದೇಗುಲಕ್ಕೆ ಬೀಗ ಜಡಿದಿರುವ ಘಟನೆ ತಮಿಳುನಾಡಿನ ಮೇಲ್ಪಾಡಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ
ಏನಿದು ಘಟನೆ?ಈ ವರ್ಷದ ಏಪ್ರಿಲ್‌ನಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ದೇವಾಲಯಕ್ಕೆ ಪ್ರವೇಶಿಸಿದ್ದರು. ಅಂದಿನಿಂದ ಇಂದಿನವರೆಗೆ ಎರಡು ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿತ್ತು. ಗ್ರಾಮದಲ್ಲಿ ಕಟ್ಟೆಚ್ಚರ ವಹಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಜಾತಿಯತೆ ಬಗ್ಗೆ ತಿಳುವಳಿಕೆ ಮೂಡಿಸಲು ಅಧಿಕಾರಿಗಳು ಯತ್ನಿಸಿದ್ದರು. ಆದರೆ ಈ ವಿವಾದ ಕೊನೆಗೊಳ್ಳದ ಕಾರಣ ವಿಲುಪುರಂ ಜಿಲ್ಲಾ ಕಂದಾಯ ಆಯುಕ್ತ ರವಿಚಂದ್ರನ್ ದೇವಸ್ಥಾನವನ್ನು ಸೀಲ್ ಮಾಡುವಂತೆ ಆದೇಶಿಸಿದ್ದಾರೆ.
ಗ್ರಾಮದಲ್ಲಿ ಎರಡು ಸಮುದಾಯದ ನಡುವಿನ ಸಮಸ್ಯೆಯಿಂದಾಗಿ ಇಲ್ಲಿನ ಪರಿಸ್ಥಿತಿಗಳು ಉತ್ತಮವಾಗಿಲ್ಲ. ಇದು ಕಾನೂನು ಮತ್ತು ಸುವ್ಯವಸ್ಥೆ ತೊಡಕನ್ನು ಉಂಟುಮಾಡುವ ಸಮಸ್ಯೆಗಳಿಗೆ ಅವಕಾಶ ನೀಡುತ್ತದೆ. ಎರಡು ಕಡೆಯವು ಇದನ್ನು ಬಗೆಹರಿಸಿಕೊಳ್ಳುವವರೆಗೆ ದೇವಸ್ಥಾನದ ಒಳಗೆ ಯಾರಿಗೂ ಪ್ರವೇಶವಿಲ್ಲ ಎಂದು ದೇವಾಲಯದ ದ್ವಾರಗಳ ಮೇಲೆ ಅಂಟಿಸಲಾದ ಅಧಿಕೃತ ನೋಟೀಸ್‌ನಲ್ಲಿ ಬರೆಯಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + eleven =
Remember me
