ನವದೆಹಲಿ:ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರುವ ಕೆಲವೇ ಗಂಟೆಗಳ ಮೊದಲು ಭಾರತೀಯ ರೈಲ್ವೆಯಲ್ಲಿನ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಮೌನ ಮುರಿದ ಶಿಲ್ಪಾ ಶಿಂಧೆ: ಬಾಲಿವುಡ್ ನಿರ್ಮಾಪಕನಿಂದ ಮೋಹಿಸಲು ಒತ್ತಡ..
ಫೋಗಟ್ ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಇದನ್ನು ಬಹಿರಂಗಪಡಿಸಿದ್ದಾರೆ. ತಮ್ಮ ಜೀವನದ ಈ ನಿರ್ಣಾಯಕ ಹಂತದಲ್ಲಿ ರೈಲ್ವೇ ಉದ್ಯೋಗ ತ್ಯಜಿಸಲು ನಿರ್ಧರಿಸಿ ಸಂಬಂಧಪಟ್ಟ ರೈಲ್ವೇ ಅಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಶುಕ್ರವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ವಿನೋಶ್ ಫೋಗಟ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಬಜರಂಗ್ ಪುನಿಯಾ ಅವರನ್ನು ಹರಿಯಾಣ ಚುನಾವಣಾ ಪ್ರಚಾರ ಸಮಿತಿಯ ಸಹ-ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಪಕ್ಷ ನೇಮಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಕಳೆದ ಕೆಲವು ತಿಂಗಳುಗಳಿಂದ ಫೋಗಟ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ರಾಜಕೀಯ ವಲಯದಲ್ಲಿ ಮಾತುಗಳು ಕೇಳಿಬರುತ್ತಿದ್ದವು. ಈಗ ಅದು ನಿಜವಾದಂತಾಗಿದೆ.
ತಿರುಪತಿ-ತಿರುಮಲೆಯ ಶೇಷಾಚಲ ಅರಣ್ಯದಲ್ಲಿ ಕಾಣಿಸಿಕೊಂಡ ಅಪರೂಪದ ಬಂಗಾರು ಹಲ್ಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + twelve =
Remember me
