ಉತ್ತರಾಖಂಡ:ಅಕ್ರಮ ಮದರಸಾವನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ನಗರ ಪ್ರದೇಶದಲ್ಲಿ ತೀವ್ರ ಹಿಂಸಾಚಾರ ಭುಗಿಲೆದ್ದಿದ್ದು, ಪೊಲೀಸ್‌ ಅಧಿಕಾರಿಗಳ ಮೇಲೆ ಕಲ್ಲು ತೂರಿದ್ದಲ್ಲದೆ, ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರಾಖಂಡದ ಹಲ್ದ್ವಾನಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಭಾರತ ತಂಡ ಗೆದ್ದರೂ ಜಂಟಿ ಚಾಂಪಿಯನ್​! ಸ್ಯಾಫ್​ ಮಹಿಳಾ ಫುಟ್​ಬಾಲ್ ಟೂರ್ನಿಯ ಫೈನಲ್​ನಲ್ಲಿ ವಿಚಿತ್ರ ತೀರ್ಪು!
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾವನ್ನು ಉರುಳಿಸಿದ ಕೆಲವೇ ಗಂಟೆಗಳಲ್ಲಿ ಆಕ್ರೋಶಕ್ಕೊಳಗಾದ ಸ್ಥಳೀಯರು, ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಿ, ಪೊಲೀಸರ ಕಾರು ಸೇರಿದಂತೆ ಇತರೆ ವಾಹನಗಳಿಗೆ ಬೆಂಕಿ ಹಚ್ಚಿ, ಗಲಭೆ ಆರಂಭಿಸಿದ್ದಾರೆ. ಈ ಹಿಂಸಾತ್ಮಕ ಘರ್ಷಣೆಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.
ಪರಿಸ್ಥಿತಿ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಹಲ್ದ್ವಾನಿಗೆ ಹೆಚ್ಚುವರಿ ಪೊಲೀಸ್​ ಪಡೆಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ಕರೆದಿದ್ದಾರೆ. ಹಲ್ದ್ವಾನಿಯ ಮುನ್ಸಿಪಲ್ ಕಾರ್ಪೊರೇಷನ್ ಬಂಭುಲ್ಪುರ ಪೊಲೀಸ್ ಠಾಣೆ ಬಳಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ನಂಬಲಾದ ಮದರಸಾವನ್ನು ಕೆಡವಲಾಯಿತು. ಈ ಕ್ರಮಕ್ಕೆ ಪ್ರತಿಕ್ರಿಯಿಸಿದ ಸ್ಥಳೀಯರ ಗುಂಪೊಂದು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದೆ.
ಇದನ್ನೂ ಓದಿ:ನಿತ್ಯಭವಿಷ್ಯ: ಸ್ವಂತ ವಾಹನ ಹೊಂದಿರುವ ಈ ರಾಶಿಯವರಿಗಿಂದು ಬಹಳ ತೊಂದರೆ ಎಚ್ಚರ
ಇದರಿಂದಾಗಿ ಹಲವಾರು ಅಧಿಕಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಅನೇಕ ವಾಹನಗಳು ಧ್ವಂಸಗೊಂಡಿವೆ. ದುಷ್ಕರ್ಮಿಗಳು ಟ್ರಾನ್ಸ್‌ಫಾರ್ಮರ್‌ಗೆ ಬೆಂಕಿ ಹಚ್ಚಿದ ಪರಿಣಾಮ ಆ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಕೂಡ ಉಂಟಾಗಿದೆ,(ಏಜೆನ್ಸೀಸ್).
ನಿತ್ಯಭವಿಷ್ಯ: ಸ್ವಂತ ವಾಹನ ಹೊಂದಿರುವ ಈ ರಾಶಿಯವರಿಗಿಂದು ಬಹಳ ತೊಂದರೆ ಎಚ್ಚರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − 1 =
Remember me
