ಹೌರಾ:ಪಶ್ಚಿಮ ಬಂಗಾಳದ ಹೌರಾದಲ್ಲಿ ಗುರುವಾರ ಸಂಜೆ ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ಘರ್ಷಣೆಯಿಂದ ಸಂಭವಿಸಿದ್ದ ಹಿಂಸಾಚಾರ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಶಿಬಿಪುರ್​​ದಲ್ಲಿ ಶುಕ್ರವಾರ ನಡೆದಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಗಾಯಗೊಂಡಿದ್ದು 36 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಹೌರಾದ ಶಿಬಿಪುರ್​ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕ ಕ್ರಮಗಳನ್ನು ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH| West Bengal: Heavy presence of security personnel in Shibpur area of Howrah where fresh violence broke out today, a day after arson on 'Ram Navami'.pic.twitter.com/yiJ80c53kq
ಇದನ್ನೂ ಓದಿ:ಶ್ರೀ ರಾಮನ ತೊಡೆ ಏರಿ ಹೂಮಾಲೆ ಹಾಕಿದ್ದಕ್ಕೆ ಕ್ಷಮೆಯಾಚಿಸಿದ ಬಿಜೆಪಿ ಶಾಸಕ
ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್​ ಷಾ ಪಶ್ಚಿಮ ಬಂಗಾಳ ರಾಜ್ಯಪಾಲರಾದ ಸಿ.ವಿ.ಆನಂದ ಬೋಸ್​ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸುಕಂತಾ ಮಜುಂದಾರ್​ ಅವರಿಂದ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ವರದಿ ಕೇಳಿದ್ಧಾರೆ ಎಂದು ತಿಳಿದು ಬಂದಿದೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್​ ಮುಖ್ಯಸ್ಥ ಅಮಿತ್​ ಮಾಳವಿಯಾ ಟ್ವೀಟ್​ ಮಾಡಿ ಬಂಗಾಳದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು ಹಿಂಸಾಚಾರಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.
Situation is completely out of control in Howrah. Mobs turn violent. After attack on Ramnavami Shobha Yatra, fresh violence erupts in Shibpur area of Howrah. Media has been attacked. Law and order is a state subject and Bengal Home Minister Mamata Banerjee has failed completely…pic.twitter.com/EbKWN7TlwV

ಘಟನೆ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೊಂದು ಬಿಜೆಪಿ ಪ್ರಾಯೋಜಿತ ಹಿಂಸಾಚಾರವಾಗಿದ್ದು ತಪ್ಪಿತಸ್ಥರು ಯಾರು ಆದರು ಬಿಡುವ ಮಾತಿಲ್ಲ ಎಂದು ಹೇಳಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ NIA ತನಿಖೆ ಹಾಗೂ ಗಲಭೆ ಪೀಡಿತ ಪ್ರದೇಶಗಳಲ್ಲಿ ಕೇಂದ್ರ ಶಶಸ್ತ್ರ ಮೀಸಲು ಪಡೆಗಳನ್ನು ನಿಯೋಜಿಸುವಂತೆ ಕೋರಿ ಕಲ್ಕತ ಹೈಕೋರ್ಟ್​​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
I have filed a Public Interest Litigation today in the Hon’ble High Court at Calcutta pertaining to the incidents of violence & attack on the Ram Navami processions at Howrah & Dalkhola. I have prayed for NIA probe and immediate deployment of Central Forces in such areas…(1/2)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 18 =
Remember me
