ಲಖನೌ:ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟವಾಗಿರುವ ಘಟನೆ ಉತ್ತರಪ್ರಧೇಶದ ನೋಯ್ಡಾದ ಗಾರ್ಡನ್​ ಗ್ಯಾಲೇರಿಯಾ ಮಾಲ್​ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಎರಡು ಗುಂಪುಗಳ ಸದಸ್ಯರ ಪರಸ್ಪರ ನಿಂದಿಸುತ್ತಾ ಹೊಡೆದಾಡುತ್ತಿರುವುದನ್ನು ಕಾಣಬಹುದು. ಕುಡಿದ ಮತ್ತಿನಲ್ಲಿ ಗಲಾಟೆಯಾಗಿದ್ದು, ಪಬ್​ನ ಸಿಬ್ಬಂದಿ ಜಗಳ ಬಿಡಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.
ಘಟನೆ ಕುರಿತು ಪ್ರತಿಕ್ರಿಯಿಸಿರುವ ನೋಯ್ಡಾ ಎಸಿಪಿ ರಜನೀಶ್​ ವರ್ಮಾ ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು, ಯಾವ ಕಾರಣಕ್ಕೆ ಹೊಡೆದಾಡಿಕೊಂಡಿದ್ದಾರೆ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ.
ಇದನ್ನೂ ಓದಿ:ಗದರ್​​-2 ಸಕ್ಸಸ್​ ಮೀಟ್​; ಮುನಿಸು ಮರೆತು ಒಂದಾದ ಶಾರುಖ್​-ಸನ್ನಿ ಡಿಯೋಲ್​
ಹೊಡೆದಾಟದ ವಿಡಿಯೋ ವೈರಲ್​ ಆಗಿದ್ದು, ಈ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೆಕ್ಟರ್​-39ರ ಪೊಲೀಸ್​ ಠಾಣಾಧಿಕಾರಿಗೆ ಸೂಚಿಸಿದ್ದೇವೆ. ಅಗತ್ಯವಿದ್ದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ. ಗಾರ್ಡನ್​ ಗ್ಯಾಲೇರಿಯಾ ಮಾಲ್​ನಲ್ಲಿ ಪದೇ ಪದೇ ಈ ರೀತಿಯ ಅಹಿತಕರ ಘಟನೆಗಳು ನಡೆಯುತ್ತಿದ್ದು, ಇದರ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ನೋಯ್ಡಾ ಎಸಿಪಿ ರಜನೀಶ್​ ವರ್ಮಾ ತಿಳಿಸಿದ್ದಾರೆ.
ಕಳೆದ ವರ್ಷ ನಡೆದ ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜಕೀಯದ ವಿಚಾರವಾಗಿ ಆರಂಭವಾದ ಗಲಾಟೆಯೂ ಒಬ್ಬರ ಅಂತ್ಯದಲ್ಲಿ ಕೊನೆಗೊಂಡಿತ್ತು. ಘಟನೆಯಲ್ಲಿ ಇನ್ನಿಬ್ಬರು ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಗಾರ್ಡನ್​ ಗ್ಯಾಲೇರಿಯಾ ಮಾಲ್​ನ ಪಬ್​ನಲ್ಲಿ ಈ ಘಟನೆ ನಡೆದಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
