ಕೇದರನಾಥ:ಉತ್ತರಾಖಂಡದ ಪ್ರಸಿದ್ದ ಯಾತ್ರಾ ಸ್ಥಳ ಕೇದರನಾಥ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ತನ್ನ ಪ್ರಿಯಕರನಿಗೆ ಪ್ರಪೋಸ್​ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ವಿಡಿಯೋ ವೈರಲ್​ ಆದ ಬೆನ್ನಲ್ಲೇ ಸಾಕಷ್ಟು ಖಂಡನೆ ವ್ಯಕ್ತವಾಗಿದ್ದು ಈ ನಿಟ್ಟಿನಲ್ಲಿ ಯುವಕ ಹಾಗೂ ಯುವತಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕೇದರನಾಥ ದೇವಾಲಯದ ಅರ್ಚಕರು ಈ ಸಂಬಂಧ ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಪೊಲೀಸರಿಗೆ ಪತ್ರ ಬರೆದಿರುವ ದೇವಸ್ಥಾನದ ಅರ್ಚಕರು ದೇವಸ್ಥಾನದಲ್ಲಿ ಈ ರೀತಿ ವಿಡಿಯೋ ಮಾಡುವುದರಿಂದ ಧಾರ್ಮಿಕ ಕ್ಷೇತ್ರದ ಪಾವಿತ್ರತೆಯ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಿದೆ. ಇಂತಹ ವಿಡಿಯೋ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಎಂದು ಪೊಲೀಸರಿಗೆ ಬರೆದಿರುವ ಪತ್ರದಲ್ಲಿ ಆಗ್ರಹಿಸಲಾಗಿದೆ.
ಇದನ್ನೂ ಓದಿ:ಮಹಾರಾಷ್ಟ್ರದ ರೀತಿಯಲ್ಲೇ ಕರ್ನಾಟದಲ್ಲೂ ಕ್ಷಿಪ್ರ ರಾಜಕೀಯ ಬೆಳವಣಿಗೆ: ಕೆ.ಎಸ್​. ಈಶ್ವರಪ್ಪ
ವೈರಲ್​ ಆಗಿರುವ ವಿಡಿಯೋದಲ್ಲಿ ಯುವತಿ ಒಬ್ಬಳು ಕೇದರನಾಥ ದೇವಾಲಯದ ಮುಂಭಾಗ ಮಂಡಿಯೂರಿ ತನ್ನ ಪ್ರಿಯಕರನಿಗೆ ಪ್ರಪೋಸ್​ ಮಾಡುತ್ತಾಳೆ. ಇದನ್ನು ಕಂಡು ಕೆಲವರು ಆಶ್ಚರ್ಯಕ್ಕೆ ಒಳಗಾದರೆ ಮತ್ತಷ್ಟು ಜನ ಇದನ್ನು ತಮ್ಮ ಮೊಬೈಲ್​ ಫೋನಿನಲ್ಲಿ ಸೆರೆ ಹಿಡಿಯುತ್ತಾರೆ. ಈ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಲವರು ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿಡಿಯೋ ವೈರಲ್​ ಆಗಲೆಂದು ಈ ರೀತಿ ಮಾಡುವುದು ಸರಿಯಲ್ಲ. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತ ಕೃತ್ಯವಾಗಿದ್ದು, ಈ ರೀತಿ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಗಳು ಕೇಳಿ ಬಂದಿದ್ದವು.
One of the Reasons why Smartphones should be Banned from All Leading Temples & ShrinesJust a Basic Phone within 20 KMs from the Main Temple, Eliminates Unnecessary CrowdPS – I’m writing this from Kedarnath 🛕https://t.co/FQVxMAUEFm
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
