ಗಾಂಧಿನಗರ:ಗುಜರಾತ್‌ನ ಅಮ್ರೇಲಿಯಲ್ಲಿ ದಾರುಣ ಘಟನೆಯೊಂದು ಸಂಭವಿಸಿದೆ. ಕೆಲವು ಕಾರ್ಮಿಕರು ಗೋಡೌನ್​ನಲ್ಲಿ ಗೋದಿಯ ಮೂಟೆಗಳನ್ನು ಇಳಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ:ಕೇಂದ್ರ ಸಚಿವರನ್ನು ಭೇಟಿ ಮಾಡಿದ ಎಂ.ಬಿ. ಪಾಟೀಲ್​; ರಾಜ್ಯದ ಬೇಡಿಕೆಗಳ ಕುರಿತು ಚರ್ಚೆ
ಗೋದಿಯ ಮೂಟೆಗಳನ್ನು ಇಳಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಮೂಟೆಗಳು ಕಾರ್ಮಿಕರ ಮೇಲೆ ಬಿದ್ದಿವು. ಗೋಣಿ ಚೀಲಗಳು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗೋಡೌನ್‌ನಲ್ಲಿ ಗೋಧಿಯ ಮೂಟೆಗಳನ್ನು ಇಳಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಮೂಟೆಗಳು ಕಾರ್ಮಿಕರ ಮೇಲೆ ಬಿದ್ದ ವಿಡಿಯೋ ಒಂದು ತುಂಬಾನೇ ವೈರಲ್ ಆಗುತ್ತಿದೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಅರ್ಚನಾ ಪುಷ್ಪೇಂದ್ರ ಎಂಬ ಹೆಸರಿನ ಬಳಕೆದಾರರು ಗೋಡೌನ್​ ಒಂದರಲ್ಲಿ ನಡೆದಿರುವ ಅವಘಡದ 15 ಸೆಕೆಂಡ್‌ಗಳ ವಿಡಿಯೋ ಹಂಚಿಕೊಂಡಿದ್ದಾರೆ.
गेहूं की बोरियां उतारते समय हुआ हादसापांच मज़दूर दबेएक की मौत चार घायल#Amrelipic.twitter.com/D6CZ7nsyeu
— Archana Pushpendra (@archanapsp)September 9, 2024

ವರದಿಗಳ ಪ್ರಕಾರ, ಮೂಟೆಗಳ ಅಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಲು ತಕ್ಷಣವೇ ಧಾವಿಸಿದರು, ಆದರೆ ಅವರನ್ನು ಹೊರತೆಗೆಯುವ ವೇಳೆಗೆ ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದನು. ಗಾಯಾಳುಗಳನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರಂಭಿಕ ಪೊಲೀಸ್ ತನಿಖೆಯ ಪ್ರಕಾರ, ಗೋಧಿ ಚೀಲಗಳ ಅಸಮರ್ಪಕ ನಿರ್ವಹಣೆ ಮತ್ತು ಗೋಡೌನ್​ನಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ವೇಳೆ ಐವರು ಕಾರ್ಮಿಕರು ಇದ್ದರು, ಚೀಲವನ್ನು ಇಳಿಸಲು ಯತ್ನಿಸಿದಾಗ ಕೆಳಭಾಗದಲ್ಲಿ ಒಬ್ಬರು ಜಾರಿಬಿದ್ದು ಕುಸಿತಕ್ಕೆ ಕಾರಣವಾಗಿದೆ. ಪೊಲೀಸರು ಮೃತ ಕಾರ್ಮಿಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಭಯೋತ್ಪಾದಕರಿಗೆ ಭಯ ಇಲ್ಲ: ಆರ್​. ಅಶೋಕ್ ವಾಗ್ದಾಳಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − 13 =
Remember me
