ನವದೆಹಲಿ:ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿನಿತ್ಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಕೆಲವೊಂದು ವಿಡಿಯೋಗಳು ಕುತುಹೂಲಕಾರಿಯಾಗಿದ್ದು, ಜನರನ್ನು ಯೋಚಿಸುವಂತೆ ಮಾಡುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಈ ಘಟನೆ ನಡೆಯಲು ಹೇಗೆ ಸಾಧ್ಯ ಎಂದು ಜನರು ಲೆಕ್ಕಾಚಾರ ಹಾಕುತ್ತಿದ್ದಾರೆ.
ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸ್ಕೂಟರ್​ ಒಂದು ನೇತಾಡುತ್ತಿರುವನ್ನು ಸ್ಪಷ್ಟವಾಗಿ ಗಮನಿಸಬಹುದಾಗಿದೆ. ರಸ್ತೆಯಲ್ಲಿ ಸಂಚರಿಸುತ್ತಾ ಇರಬೇಕಾದ ಸ್ಕೂಟರ್ ಇಷ್ಟು ಎತ್ತರದಲ್ಲಿ ಹೇಗೆ ಸಿಕ್ಕಿಹಾಕಿಕೊಂಡಿದೆ ಎಂದು ವಿಡಿಯೋ ನೋಡಿದ ಮಂದಿ ಯೋಚಿಸುತ್ತಿದ್ದಾರೆ. ಇದೇ ಕಾರಣಕ್ಕೆ ಈ ವಿಡಿಯೋ ಮತ್ತಷ್ಟು ವೈರಲ್ ಆಗುತ್ತಿದೆ.
ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮದರಸಾ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗಾಭ್ಯಾಸ
A post shared by BAHU_EXPRESS_NEWS 🔴 (@bahu_express_news)
ವೈರಲ್ ಆಗುತ್ತಿರುವ ವಿಡಿಯೋವನ್ನು ಸ್ಪಷ್ಟವಾಗಿ ಗಮನಿಸಿದಾಗ, ಅಲ್ಲೇ ಪಕ್ಕದಲ್ಲಿ ಸೂಚನಾ ಫಲಕವೊಂದು ಮುರಿದು ಬಿದ್ದಿರುವುದು ಕಾಣಿಸುತ್ತಿದೆ. ವಾಸ್ತವದಲ್ಲಿ ರಸ್ತೆ ಮಧ್ಯೆ ನಡೆದ ಅಪಘಾತದ ತೀವ್ರತೆಗೆ ಸ್ಕೂಟರ್ ಸಾಕಷ್ಟು ಎತ್ತರಕ್ಕೆ ಹಾರಿದ್ದು, ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದೆ. ಹೀಗಾಗಿ ಸ್ಕೂಟರ್ ನೇತಾಡುತ್ತಿದೆ. ಇದೀಗ ವ್ಯಕ್ತಿಯೊಬ್ಬರು ಘಟನೆಯ ವಿಡಿಯೋ ಮಾಡಿದ್ದು, ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ವಿಡಿಯೋ ನೋಡಿದ ಜನರು ತಮಾಷೆಯ ಕಾಮೆಂಟ್‌ ಮಾಡುತ್ತಿದ್ದಾರೆ. ಈ ಘಟನೆ ನಡೆದಿರುವುದು ಎಲ್ಲಿ? ಸ್ಕೂಟರ್ ಇಷ್ಟು ಎತ್ತರದಲ್ಲಿ ಹೇಗೆ ಸಿಕ್ಕಿಹಾಕಿಕೊಂಡಿತು ಎಂಬುದರ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಈ ವಿಡಿಯೋ ಮಾತ್ರ ಎಲ್ಲೆಡೆ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಜನರು ತಮ್ಮದೇ ಹಾಸ್ಯದ ಧಾಟಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಇಷ್ಟು ಎತ್ತರಕ್ಕೆ ಹಾರಿ ಹೋಗಿರುವ ಸ್ಕೂಟರ್ ಹೇಗೆ ಕೆಳಗಿಳಿದು ಬರುತ್ತದೆ? ಎಂದು ಒಬ್ಬ ಬಳಕೆದಾರ ಕಾಮೆಂಟ್ ಮಾಡಿದ್ದಾನೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + two =
Remember me
