ನವದೆಹಲಿ:ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ(Virat Kohli), ಓಡಿಶಾ ರೈಲು ದುರಂತದಲ್ಲಿ(Odisha Train Tragedy)ಸಾವನ್ನಪ್ಪಿದ ಕುಟುಂಬಗಳಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ:ಪ್ರೀತಿ ಕೊಂದ ಕೊಲೆಗಾತಿಗೆ ಕೋರ್ಟ್​ನಿಂದ ಮತ್ತೊಮ್ಮೆ ಶಾಕ್​: ಈಕೆಯ ಬಿಡುಗಡೆ ಅಪಾಯಕಾರಿಯಂತೆ!
ತಮ್ಮ ಅಧಿಕೃತ ಟ್ವಿಟರ್(Twitter)ಖಾತೆಯಲ್ಲಿ ಟ್ವೀಟ್ ಮಾಡಿದ ವಿರಾಟ್, “ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸುದ್ದಿ ಕೇಳಿ ಅತೀವ ದುಃಖವಾಯಿತು. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತಲುಪಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ಗಂಟೆಗೆ ಸಂಭವಿಸಿದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲನ್ನು ಒಳಗೊಂಡ ರೈಲು ಅಪಘಾತದಲ್ಲಿ 300 ಜನರು ಸಾವನ್ನಪ್ಪಿದ್ದಾರೆ ಮತ್ತು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಒಡಿಶಾ ರೈಲು ದುರಂತ; 300ಕ್ಕೇರಿದ ಮೃತರ ಸಂಖ್ಯೆ
ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ, ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಮತ್ತು ಸಣ್ಣ ಗಾಯಗಳಿಗೆ ಒಳಗಾದವರಿಗೆ 50,000 ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ಕಛೇರಿ(PM Office)ಘೋಷಿಸಿದೆ,(ಏಜೆನ್ಸೀಸ್).
ಮಾವುಗಳಲ್ಲೇ ಸಿಕ್ಕಾಪಟ್ಟೆ ದುಬಾರಿ ಈ ‘ಮಿಯಾಝಾಕಿ’ ಮಾವು; ಕೆಜಿಗೆ ಬೆಲೆ ಎಷ್ಟಿದೆ ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − three =
Remember me
